Friday, November 22, 2024
ರಾಜ್ಯಶಿಕ್ಷಣ

ದ್ವಿತೀಯ PUC ವಾರ್ಷಿಕ ಪರೀಕ್ಷೆ ಜುಲೈ 3ನೇ ವಾರ ಫಿಕ್ಸ್.? ಆಗಸ್ಟ್ ನಲ್ಲಿ ಫಲಿತಾಂಶ.?-ಕಹಳೆ ನ್ಯೂಸ್

ಬೆಂಗಳೂರು : ನಿನ್ನೆ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಅವರು ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರೊಂದಿಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವ ಸಂಬಂಧ ವೀಡಿಯೋ ಸಂವಾದ ನಡೆಸಿದರು. ಇಂತಹ ವೀಡಿಯೋ ಸಂವಾದದಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಹಿತ ದೃಷ್ಠಿಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದು ಸೂಕ್ತ ಎಂಬ ಅಭಿಪ್ರಾಯವನ್ನ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ನೀಡಿದ್ದರು. ಈ ಹಿನ್ನಲೆಯಲ್ಲಿ ಶಿಕ್ಷಣ ಇಲಾಖೆಯ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುತ್ತಿದೆ. ಜುಲೈ 3ನೇ ವಾರ ಪರೀಕ್ಷೆಗೆ ದಿನಾಂಕ ನಿಗದಿ ಗೊಳಿಸಲಿದೆ ಎನ್ನಲಾಗುತ್ತಿದ್ದು, ಆಗಸ್ಟ್ ನಲ್ಲಿ ಪರೀಕ್ಷೆಯ ಫಲಿತಾಂಶ ಕೂಡ ಪ್ರಕಟಿಸಲಿದೆ ಎನ್ನಲಾಗುತ್ತಿದೆ.

ಕೊರೋನಾ 2ನೇ ಅಲೆಯ ಭೀಕರತೆಯ ನಡುವೆಯೂ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರೋಗ ನಿಯಂತ್ರಣಕ್ಕೆ ಬಂದ ನಂತ್ರ, ಶಿಕ್ಷಣ ಇಲಾಖೆ ನಡೆಸಲು ಸಿದ್ಧತೆ ಮಾಡಿಕೊಂಡಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಿದ್ಧತೆಗೆ ಶಿಕ್ಷಣ ಇಲಾಖೆ ಸೂಚಿಸಿದೆ ಎನ್ನಲಾಗಿದೆ. ಜುಲೈ 3ನೇ ವಾರದಂದು ಪರೀಕ್ಷೆಗೆ ದಿನಾಂಕ ನಿಗದಿ ಪಡಿಸಲಿದೆ ಎನ್ನಲಾಗುತ್ತಿದ್ದು, ಪರೀಕ್ಷೆಗೆ ಒಂದು ತಿಂಗಳ ಮೊದಲೇ ಪರೀಕ್ಷಾ ವೇಳಾಪಟ್ಟಿಯನ್ನು ಶಿಕ್ಷಣ ಇಲಾಖೆ ಪ್ರಕಟಿಸಲಿದೆ ಎನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿದ್ಯಾರ್ಥಿಗಳ ಭವಿಷ್ಯದ ಮುಖ್ಯ ಉದ್ದೇಶದಿಂದ ಶಿಕ್ಷಣ ಇಲಾಖೆಯು ಕೊರೋನಾ ನಿಯಂತ್ರಣಕ್ಕೆ ಬಂದ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ. ಪರೀಕ್ಷೆಗಾಗಿ ಸಿದ್ಧತೆ ಕೈಗೊಳ್ಳಲು ಸೂಚಿಸಿರುವಂತ ಇಲಾಖೆ, ಈ ಬಾರಿ ಪರೀಕ್ಷೆಯನ್ನು ಕೂಡ ಸರಳೀಕೃತಗೊಳಿಸಲಾಗುತ್ತಿದೆ ಎನ್ನಲಾಗಿದೆ. ಪ್ರಶ್ನೆ ಪತ್ರಿಕೆ ತಯಾರಿಯ ಸಿದ್ಧತೆ ಪೂರ್ಣಗೊಳಿಸಿರುವಂತ ಶಿಕ್ಷಣ ಇಲಾಖೆ, ಜುಲೈ 3ನೇ ವಾರದಲ್ಲಿ ಪರೀಕ್ಷೆ ನಡೆಸಲು ದಿನಾಂಕವನ್ನು ಜೂನ್ ನಲ್ಲಿಯೇ ಪ್ರಕಟಿಸಲಿದೆ ಎನ್ನಲಾಗಿದೆ. ಆ ಬಗ್ಗೆ ಕಾದು ನೋಡಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು