Recent Posts

Sunday, January 19, 2025
ಕಡಬ

ಕಡಬ : ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಮೃತ್ಯು-ಕಹಳೆ ನ್ಯೂಸ್

ಕಡಬ : ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದಲ್ಲಿ ಸೋಮವಾರ ನಡೆದಿದೆ.

ಮೃತ ಯುವಕನನ್ನು ಕಡಬ ತಾಲೂಕು ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಎಂದು ಗುರುತಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಲಿಜು ಅವರು ಸೋಮವಾರ ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಹರಿದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು