ಕೊರೋನಾ ಭೀತಿಯ ನಡುವೆ ಹೆಚ್ಚುತ್ತಿರುವ ಬ್ಲಾಕ್ ಫಂಗಸ್ ಗೆ ಬೆಳ್ತಂಗಡಿಯ ನಿವಾಸಿಯೋರ್ವರು ಮೃತಪಟ್ಟಿದ್ದಾರೆ. ಇದು ಬೆಳ್ತಂಗಡಿ ತಾಲೂಕಿನಲ್ಲಿ ಬ್ಲಾಕ್ ಫಂಗಸ್ ಗೆ ಮೊದಲ ಬಲಿಯಾಗಿದೆ . ಕಪ್ಪು ಶಿಲೀಂಧ್ರ ಕಾಟಕ್ಕೆ ಬಲಿಯಾದ ವ್ಯಕ್ತಿಯನ್ನು ತಣ್ಣೀರುಪಂತ ಗ್ರಾಮದ ಅಳಕೆ ನಿವಾಸಿ ನೋಣಯ್ಯ ಪೂಜಾರಿ (55)ಎಂದು ಗುರುತಿಸಲಾಗಿದೆ.
ನೋಣಯ್ಯ ಪೂಜಾರಿ ಇವರು ಕಣ್ಣಿನ ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು ಹೀಗಾಗಿ ಮಂಗಳೂರಿನ ಕೆ.ಎಂ.ಸಿ. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಅವರ ತಪಾಸಣೆ ನಡೆಸಿದಾದ ಕೊರೊನಾ ಪಾಸಿಟಿವ್ ಬಂದಿರುವುದು ಪತ್ತೆಯಾಗಿತ್ತು.
ಇದಲ್ಲದೆ ಇವರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಕಣ್ಣಿನ ಶಸ್ತ್ರಚಿಕಿತ್ಸೆ ಬಳಿಕ ಅಲ್ಲಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೇ 27ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ ಒಂದೇ ದಿನ ಐದು ಬ್ಲ್ಯಾಕ್ ಫಂಗಸ್ ರೋಗ ಪತ್ತೆಯಾಗಿದೆ . ಈ ಪೈಕಿ ಒಬ್ಬರು ಜಿಲ್ಲೆಯವರಾಗಿದ್ದು ಉಳಿದ ನಾಲ್ವರು ಹೊರಜಿಲ್ಲೆಯವರಾಗಿದ್ದಾರೆ. ಈವರೆಗೆ ಒಟ್ಟು ೩೦ ಮಂದಿಯಲ್ಲಿ ರೋಗ ಕಾಣಿಸಿಕೊಂಡಿದೆ