Recent Posts

Monday, January 20, 2025
ಬಂಟ್ವಾಳ

ವಿಟ್ಲ: ಅನ್ಯಕೋಮಿನ ಯುವಕನಿಂದ ಅತ್ಯಾಚಾರ ಯತ್ನ; ಆರೋಪಿ ಹ್ಯಾರೀಸ್ ಬಂಧನ- ಕಹಳೆ ನ್ಯೂಸ್

ವಿಟ್ಲ: ಬಂಟ್ವಾಳ ತಾಲೂಕಿನ ಕಾಡುಮಠ ಕಕ್ಷೀಕೇರಿ ಎಂಬಲ್ಲಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪಿಯನ್ನು ಇಂದು ಮುಂಜಾನೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಸ್ಲಿಂ ಯುವಕನೊರ್ವ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಗೆ ತೆರಳಿ ಬಲವಂತವಾಗಿ ಅತ್ಯಾಚಾರಕ್ಕೆ
ಯತ್ನಿಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬಂಧಿತನನ್ನು ಸುಮಾರು 30 ವರ್ಷ ವಯಸ್ಸಿನ ಹ್ಯಾರೀಸ್ ಎಂದು ಗುರುತಿಸಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಸಂತ್ರಸ್ಥೆಯ ಮನೆಗೆ ಪೊಲೀಸರು ಆಗಮಿಸಿ ಹೆಚ್ಚಿನ ಮಾಹಿತಿ ಕಲೆಹಾಕಿದ್ದಾರೆ. ನೊಂದ ಯುವತಿಯ ಮನೆಗೆ ಮಹಿಳಾ ಮತ್ತು ಮಕ್ಕಳ ಶಿಶು ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಹಾಗೂ
ಕೊಳ್ಳಾಡು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ವಿಟ್ಲ ಪೋಲಿಸ್ ಠಾಣೆಗೆ ದೂರು ನೀಡಿ ಪೋಸ್ಕೋ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಡಿ.ವೈ.ಎಸ್.ಪಿ ವೆಲೆಂಟೈನ್ ಡಿಸೋಜಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು