Recent Posts

Sunday, January 19, 2025
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರು ಗ್ಯಾಂಗ್​ರೇಪ್​ ಪ್ರಕರಣದ ಮೂವರು ಆರೋಪಿಗಳು ಚೆನ್ನೈಗೆ ಪರಾರಿ-ಕಹಳೆ ನ್ಯೂಸ್

ಬೆಂಗಳೂರು(ಮೇ 31): ಬಾಂಗ್ಲಾದೇಶ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಚ್ಚರಿಯ ಘಟನೆಯೊಂದು ನಡೆದಿದೆ. ಗ್ಯಾಂಗ್​ರೇಪ್​ ಪ್ರಕರಣದ ಮೂವರು ಪ್ರಮುಖ ಆರೋಪಿಗಳು ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಗಂಡ-ಹೆಂಡತಿ ಸೇರಿ ಓರ್ವ ಯುವಕ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿರುವ ಗಂಡ-ಹೆಂಡತಿ ಘಟನೆ ನಡೆದ ದಿನ ಸ್ಥಳದಲ್ಲೇ ಇದ್ದು ಪ್ರಚೋದನೆ ಕೊಟ್ಟಿದ್ದರು ಎಂದು ತಿಳಿದು ಬಂದಿದೆ. ಪರಾರಿಯಾಗಿರುವ ಯುವಕ ಸಹ ಯುವತಿ ಮೇಲೆ ದೌರ್ಜನ್ಯ ಎಸಗಿದ್ದ ಎನ್ನಲಾಗಿದೆ. ಘಟನೆ ನಡೆದ ಬಳಿಕ ಈ ಮೂವರು ಆರೋಪಿಗಳು ಚೆನ್ನೈಗೆ ಪಲಾಯನ ಮಾಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮೂವರು ಆರೋಪಿಗಳು ಬಾಂಗ್ಲಾ ದೇಶದವರಾಗಿದ್ದು, ಭಾರತದಲ್ಲಿ ಅಕ್ರಮ ವಾಸ್ತವ್ಯ ಹೂಡಿದ್ದರು ಎಂದು ತಿಳಿದು ಬಂದಿದೆ. ಈ ಆರೋಪಿಗಳು ಪ್ರಕರಣದಲ್ಲಿ ಈಗಾಗಲೇ ಬಂಧಿತರಾಗಿರುವ ಆರೋಪಿಗಳ ಜೊತೆ ದಂಧೆಯಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭಿಸಿದೆ. ಈ ಪ್ರಮುಖ ಆರೋಪಿಗಳು ಬೆಂಗಳೂರಿನಿಂದ ಕಾಲ್ಕಿತ್ತಿದ್ದು, ಚೆನ್ನೈನಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಹೀಗಾಗಿ ಪೊಲೀಸರು ಆರೋಪಿಗಳ ಹುಡುಕಾಟದಲ್ಲಿದ್ದಾರೆ. ಆರೋಪಿಗಳ ಸಂಪರ್ಕಿತರನ್ನ ವಿಚಾರಣೆ ಮಾಡಿದಾಗ ಕಾಣೆಯಾದ ಮೂವರ ಬಗ್ಗೆ ಮಾಹಿತಿ ಸಿಕ್ಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸದ್ಯ ಕೋರ್ಟ್ ಗೆ ಯುವತಿಯ 164 ಹೇಳಿಕೆ ದಾಖಲಿಸಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ. ಅನುಮತಿ ಸಿಕ್ಕ ಕೂಡಲೇ ಪೊಲೀಸರು ಸಂತ್ರಸ್ತೆಯನ್ನು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ. ಸದ್ಯ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ಹಣಕಾಸಿನ ವಿಚಾರಕ್ಕಾಗಿಯೇ ದೌರ್ಜನ್ಯ ಮಾಡಲಾಗಿದೆ ಎಂದು ಸಂತ್ರಸ್ತ ಯುವತಿ(28 ವರ್ಷ) ನಿನ್ನೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ. ಘಟನೆ ನಡೆದ ಸಂದರ್ಭದಲ್ಲಿ ಓರ್ವ ಯುವತಿ ಸಹ ಇದ್ದಳು ಎಂದು ಸಂತ್ರಸ್ತೆ ಹೇಳಿಕೆ ಕೊಟ್ಟಿದ್ದಾಳೆ. ಸಂತ್ರಸ್ತೆಯ ಹೇಳಿಕೆ ಪಡೆದ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಯುವತಿಯ ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ ಸಂಪರ್ಕದಲ್ಲಿದ್ದ ಸ್ನೇಹಿತರ ತೀವ್ರ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ಆರೋಪಿಗಳ ಸಂಪರ್ಕದಲ್ಲಿದ್ದ ಕೆಲ ಯುವಕ-ಯುವತಿಯರನ್ನು ಪೊಲೀಸರು ಇಂದೂ ಸಹ ವಿಚಾರಣೆಗೆ ಕರೆದಿದ್ದಾರೆ. ಪ್ರಮುಖ ಆರೋಪಿತೆಗಾಗಿ ರಾಮಮೂರ್ತಿನಗರ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ.

ಆರೋಪಿಗಳು ಯುವತಿ ಮೇಲಿನ ದ್ವೇಷಕ್ಕೆ ಆಕೆಯ ಅತ್ಯಾಚಾರ ಎಸಗಿ ವಿಕೃತಿ ಮೆರೆದಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಚಿತ್ರೀಕರಿಸಿದ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು. ಬಾಂಗ್ಲಾದೇಶ ಸೇರಿದಂತೆ ಭಾರತದ ಈಶಾನ್ಯ ರಾಜ್ಯಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಅಸ್ಸಾಂ ರಾಜ್ಯದ ಪೊಲೀಸರಿಂದಲೂ ವಿಡಿಯೋ ಕುರಿತಾಗಿ ತನಿಖೆ ನಡೆದಿತ್ತು. ಕೃತ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಭಾಗಿಯಾರುವುದು ಬೆಳಕಿಗೆ ಬಂದಿತ್ತು. ಹೀಗಾಗಿ ಬಾಂಗ್ಲಾ ದೇಶದ ಪೊಲೀಸರಿಗೆ ಮಾಹಿತಿ ರವಾನೆ ಮಾಡಲಾಗಿತ್ತು. ಆ ಬಳಿಕ ಬಾಂಗ್ಲಾ ಪೊಲೀಸರು ಸಂತ್ರಸ್ಥೆ ಕುಟುಂಬದ ಸದಸ್ಯರನ್ನು ಪತ್ತೆಮಾಡಿದ್ದರು. ಆರೋಪಿಗಳ ಕುರಿತು ಬೆಂಗಳೂರು ಪೊಲೀಸರಿಗೆ ಮಾಹಿತಿ ರವಾನಿಸಲಾಗಿತ್ತು. ಬಾಂಗ್ಲಾ ಪೊಲೀಸರು ಬೆಂಗಳೂರು ಪೊಲೀಸ್ ಕಮೀಷನರ್ ಕಮಲ್ ಪಂತ್ ಗೆ ಮಾಹಿತಿ ನೀಡಿದ್ದರು.

ಇನ್ನು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಮೂರ್ತಿ ನಗರ ಪೊಲೀಸರು ಈಗಾಗಲೇ 6 ಮಂದಿನ್ನು ಬಂಧಿಸಿದ್ದಾರೆ. ಶುಕ್ರವಾರ ಮೂವರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಲಾಗಿದೆ. ಬಾಂಗ್ಲಾದ ಓರ್ವ ಯುವತಿ, ಸಾಗರ್, ರಿದಾಯ್ ಬಾಬು, ಮೊಹಮ್ಮದ್ ಬಾಬಾಶೇಕ್, ಹೈದರಾಬಾದ್‌ನ ಹಕೀಲ್ ಬಂಧಿತ ಆರೋಪಿಗಳು.

ಬಂಧಿತ ಬಾಂಗ್ಲಾ ಆರೋಪಿಗಳ ಬಳಿ ಯಾವುದೇ ದಾಖಲೆ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಪಾಸ್ ಪೋರ್ಟ್, ಐಡಿ ಕಾರ್ಡ್ ಆಗಲಿ ಏನು ಪತ್ತೆಯಾಗಿಲ್ಲ. ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ ಬೆಂಗಳೂರಿಗೆ ಎಂಟ್ರಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪೊಲೀಸರ ವಿಚಾರಣೆ ವೇಳೆ ಪಾಸ್ ಪೋರ್ಟ್ ಸೇರಿದಂತೆ ಯಾವುದೇ ದಾಖಲೆ ಬಗ್ಗೆ ಆರೋಪಿಗಳು ಬಾಯಿ ಬಿಡಲಿಲ್ಲ. ಆರೋಪಿಗಳು ನಾಲ್ಕೈದು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿದ್ದಾರೆ. ಆರೋಪಿ ಮೊಹಮ್ಮದ್‌ ಬಾಬು ಶೇಕ್, ತಾನು ಬಡಗಿ ಕೆಲಸ ಮಾಡುತ್ತಿರುವ ಮಾಹಿತಿ ನೀಡಿ ಆಧಾರ್ ಕಾರ್ಡ್ ಮಾಡಿಸಿಕೊಂಡಿದ್ದ ಎನ್ನಲಾಗಿದೆ.