Sunday, January 19, 2025
ರಾಜಕೀಯ

ಮೇ 1ರಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಆಗಮಿಸಲಿದ್ದಾರೆ ಪ್ರಧಾನಿ ಮೋದಿ – ಕಹಳೆ ನ್ಯೂಸ್

ಉಡುಪಿ, ಏ 23:  ಮೇ 1ರಂದು ಉಡುಪಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ ಎಂದು  ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ತಿಳಿಸಿದ್ದಾರೆ. 

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಪ್ರಚಾರಕ್ಕಾಗಿ ಮೇ 1ರಂದು ಮೋದಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ಆದಿ ಉಡುಪಿ ಹೆಲಿಪ್ಯಾಡ್‌ ಮೂಲಕ ಉಡುಪಿಗೆ ಆಗಮಿಸಲಿದ್ದಾರೆ. ಬಳಿಕ ಶ್ರೀಕೃಷ್ಣ ಮಠಕ್ಕೆ ತೆರಳಿ ದೇವರ ದರ್ಶನ, ಪರ್ಯಾಯ ಶ್ರೀವಿದ್ಯಾಧೀಶ ತೀರ್ಥ ಹಾಗೂ ಪೇಜಾವರ ಶ್ರೀಗಳನ್ನು ಭೇಟಿ ಮಾಡಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

modi

ಜಾಹೀರಾತು
ಜಾಹೀರಾತು
ಜಾಹೀರಾತು

ಮೇ 1ರಂದು ಮಧ್ಯಾಹ್ನ 3 ಗಂಟೆಗೆಎಂಜಿಎಂಮೈದಾನದಲ್ಲಿನಡೆಯುವಬೃಹತ್‌ ಸಮಾವೇಶದಲ್ಲಿಚುನಾವಣೆಪ್ರಚಾರಮಾಡಲಿದ್ದಾರೆ. ಈ ಸಮಾವೇಶದಲ್ಲಿ ದ.ಕ., ಕೊಡಗು, ಚಿಕ್ಕಮಗಳೂರು, ಉತ್ತರಕನ್ನಡಜಿಲ್ಲೆಯ 20 ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಪ್ರಧಾನಿ ಮೋದಿ ಮಂಗಳೂರಿಗೂ ಭೇಟಿ ಸಾಧ್ಯತೆ

ಕಳೆದ 2013ರ ಚುನಾವಣೆ ಸಂದರ್ಭದಲ್ಲೂ ಮೋದಿ ಆಗಮಿಸಿ, ಮಂಗಳೂರಿನ ನೆಹರು ಮೈದಾನದಲ್ಲಿ ಮೇ 2ರಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದರು. 2018 ವಿಧಾನಸಭಾ ಚುನಾವಣೆ ಹಿನ್ನೆಲೆ, ರಾಜ್ಯದಲ್ಲಿ ಏಪ್ರಿಲ್ 29ರಿಂದ ಪ್ರಚಾರ ಕಾರ್ಯ ಕೈಗೊಳ್ಳಲಿರುವ ಮೋದಿ, 16 ಚುನಾವಣಾ ರ್ಯಾಲಿಗಳಲ್ಲಿ ಮಾತನಾಡಲಿದ್ದಾರೆ. ಮೇ 8ರಂದು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

ಕೋಲಾರ ಹಾಗೂ ರಾಯಚೂರಿನಲ್ಲಿ 29, ಮೇ 1ರಂದು ಬಳ್ಳಾರಿ ಹಾಗೂ ಬೆಳಗಾವಿ, 3ರಂದು ಚಾಮರಾಜನಗರ ಹಾಗೂ ಉಡುಪಿ, 5ರಂದು ಜಮಖಂಡಿ, 6ರಂದು ಹುಬ್ಬಳ್ಳಿ ಹಾಗೂ ಕಲಬುರ್ಗಿ, 7ರಂದು ಶಿವಮೊಗ್ಗ ತುಮಕೂರು ಮತ್ತು 8ರಂದು ಮಂಗಳೂರು, ಬೆಂಗಳೂರಿನಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

5 ವಿಧಾನಸಭಾ ಕ್ಷೇತ್ರಗಳ ಪ್ರಮುಖ ಭಾಗಗಳಲ್ಲಿ ಮೋದಿ ರೋಡ್ ಶೋ ನಡೆಸುವ ಸಾಧ್ಯತೆ ಇದೆ. ಆದರೆ ಜಿಲ್ಲಾ ಬಿಜೆಪಿ ನಾಯಕರಿಗೆ ಅಧಿಕೃತವಾದ ಯಾವುದೇ ಕಾರ್ಯಕ್ರಮ, ವೇಳಾಪಟ್ಟಿ ಲಭ್ಯವಾಗಿಲ್ಲ.