Friday, November 22, 2024
ಉಡುಪಿಕ್ರೈಮ್ಸುದ್ದಿ

Breaking News : ಉಡುಪಿ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ಅಂತಿಮ ತೀರ್ಪು ಪ್ರಕಟಿಸಿದ ಉಡುಪಿ ಜಿಲ್ಲಾ ನ್ಯಾಯಾಲಯ ; ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ – ಕಹಳೆ ನ್ಯೂಸ್

ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರು ಪ್ರಮುಖ ಆರೋಪಿಗಳು ದೋಷಿ ಎಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.

ಉದ್ಯಮಿ ಭಾಸ್ಕರ್ ಶೆಟ್ಟಿಯನ್ನು ಕೊಲೆಗೈದು ಹೋಮಕುಂಡದಲ್ಲಿ ಸುಟ್ಟಿರುವ ಆರೋಪ ಸಾಬೀತಾಗಿದ್ದು, ಪತ್ನಿ ರಾಜೇಶ್ವರಿ, ಪುತ್ರ ನವನೀತ್ ಶೆಟ್ಟಿ, ರಾಜೇಶ್ವರಿ ಗೆಳೆಯ ನಿರಂಜನ ಭಟ್ ಗೆ ಶಿಕ್ಷೆ ವಿಧಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಐದನೇ ಆರೋಪಿ ಚಾಲಕ ರಾಘವೇಂದ್ರ ಖುಲಾಸೆಗೊಂಡಿದ್ದು, ನಾಲ್ಕನೇ ಆರೋಪಿ ನಿರಂಜನ್ ಭಟ್ ತಂದೆ ಶ್ರೀನಿವಾಸ್ ಭಟ್ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ಹಿನ್ನಲೆ: ಉದ್ಯಮಿ ಭಾಸ್ಕರ್ ಶೆಟ್ಟಿ 2016 ರ ಜುಲೈ 28 ರಂದು ಉಡುಪಿಯ ಇಂದ್ರಾಳಿಯಲ್ಲಿರುವ ತಮ್ಮ ಮನೆಯಿಂದ ನಾಪತ್ತೆಯಾಗಿದ್ದರು. ಎಂಟು ದಿನಗಳ ಬಳಿಕ ಮಣಿಪಾಲ ಪೊಲೀಸರು ಅವರ ಪತ್ನಿ ಮತ್ತು ಮಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಈ ವೇಳೆ ಭಾಸ್ಕರ್ ಶೆಟ್ಟಿ ಕೊಲೆ ವಿಚಾರ ಬಹಿರಂಗಗೊಂಡಿತ್ತು. ಇದೀಗ ಉಡುಪಿ ನ್ಯಾಯಾಲಯ ಆರೋಪಿಗಳನ್ನು ದೋಷಿಗಳು ಎಂದು ಪರಿಗಣಿಸಿ ತೀರ್ಪು ನೀಡಿದೆ.

ಆರೋಪಿಗಳು 2016ರ ಜು.28ರಂದು ಅಪರಾಹ್ನ 3 ಗಂಟೆಗೆ ಇಂದ್ರಾಳಿಯ ಮನೆಯಲ್ಲಿ ಭಾಸ್ಕರ್ ಶೆಟ್ಟಿಯನ್ನು ಕೊಲೆ ಮಾಡಿ, ಬಳಿಕ ಮೃತದೇಹವನ್ನು ನಂದಳಿಕೆಯಲ್ಲಿರುವ ನಿರಂಜನ ಭಟ್ ಮನೆಯಲ್ಲಿನ ಹೋಮ ಕುಂಡದಲ್ಲಿ ಹಾಕಿ ಸುಟ್ಟಿದ್ದರು. ಜು.31ರಂದು ಭಾಸ್ಕರ್ ಶೆಟ್ಟಿ ತಾಯಿ ತನ್ನ ಮಗ ನಾಪತ್ತೆಯಾಗಿರುವುದಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ತನಿಖೆ ನಡೆಸಿದ ಪೊಲೀಸರಿಗೆ ಈ ಕೊಲೆ ಬೆಳಕಿಗೆ ಬಂತು. ಆ.7ರಂದು ಪತ್ನಿ ರಾಜೇಶ್ವರಿ ಹಾಗೂ ಮಗ ನವನೀತ್ ನನ್ನು ಮತ್ತು ಆ.8ರಂದು ನಿರಂಜನ್ ಭಟ್ ನನ್ನು ಪೊಲೀಸರು ಬಂಧಿಸಿದ್ದರು.