Recent Posts

Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ನೆಟ್ಟಣಿಗೆ ಮುಡ್ನೂರು ಗ್ರಾಮದಲ್ಲಿ ಕೊರೋನದಿಂದ ಸಂಕಷ್ಟಕ್ಕೆ ಸಿಲುಕಿದ ಬಡಕುಟುಂಬಳಿಗೆ ಆಹಾರದ ಕಿಟ್ ವಿತರಿಸಿ ಮಾನವೀಯತೆ ಮೆರೆದ ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷ ಸಹಜ್ ರೈ – ಕಹಳೆ ನ್ಯೂಸ್

ಈಶ್ವರಮಂಗಲ: ಕೊರೋನಾ ವೈರಸ್ ಹರಡುವುದನ್ನು ತಡೆಯುವುದಕ್ಕಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಹಲವಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿದ್ದು ಅಂತಹ ಅರ್ಹ ಕುಟುಂಬಗಳಿಗೆ ಬಿಜೆಪಿ ಯುವ ಮೋರ್ಛಾ ಜಿಲ್ಲಾ ಉಪಾಧ್ಯಕ್ಷ, ಉದ್ಯಮಿ ಸಹಜ್ ರೈ ಬಳಜ್ಜರವರು ಆಹಾರ ಕಿಟ್ ವಿತರಣೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ನೆಟ್ಟಣಿಗೆ ಮುಡ್ನೂರು ಗ್ರಾಪಂ ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ ದಿನ ಬಳಕೆಯ ಅಗತ್ಯ ಆಹಾರದ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ಜೂ.8 ರಂದು Karnoor ನಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂದರ್ಭದಲ್ಲಿ S. C. D C C ಬ್ಯಾಂಕಿನ ನಿರ್ದೇಶಕರಾದ ಎಸ್. ಬಿ ಜಯರಾಮ ರೈ ನೆಟ್ಟಣಿಗೆ ಮುಡ್ನೂರು ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷ ಅಮರನಾಥ ಆಳ್ವ, ಗ್ರಾಪಂ ಮಾಜಿ ಗ್ರಾಪಂ ಸದಸ್ಯ ಅಬ್ದುಲ್ ಖಾದರ್. ಗ್ರಾಂ ಪಂ ಸದಸ್ಯರುಗಳು ಕುಮಾರನಾಥ ಪೂಜಾರಿ ಪ್ರದೀಪ್ ರೈ PRAFULLA ರೈ ಉಪಸ್ಥಿತರಿದ್ದರು.