Recent Posts

Sunday, January 19, 2025
ಕ್ರೈಮ್ರಾಜ್ಯಸುದ್ದಿ

ಕೋವಿಡ್ ಚಿಕಿತ್ಸೆಗೆ ಬಂದ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ ; ಆರೋಪಿ ಖಾಸಗಿ ಅಂಬುಲೆನ್ಸ್ ಚಾಲಕ ಪಿಂಟು ಅರೆಸ್ಟ್ – ಕಹಳೆ ನ್ಯೂಸ್

ಕಲಬುರಗಿ: ಕೋವಿಡ್ ಮಹಿಳಾ ರೋಗಿ ಮೇಲೆ ಅತ್ಯಾಚಾರಕ್ಕೆ ಯತ್ನ ಮಾಡಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ.

25 ವರ್ಷದ ಮಹಿಳೆ ಕೋವಿಡ್ ಚಿಕಿತ್ಸೆಗಾಗಿ ಕೋವಿಡ್ ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಿನ್ನೆ ರಾತ್ರಿ ಪಿಂಟು ಎಂಬ ಖಾಸಗಿ ಅಂಬುಲೆನ್ಸ್ ಚಾಲಕ, ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಅತ್ಯಾಚಾರ ಯತ್ನಕ್ಕೆ ಮುಂದಾಗಿದ್ದಾನೆ. ಈ ವೇಳೆ ಮಹಿಳೆ ಎಚ್ಚರಗೊಂಡು ಚೀರಾಟ ನಡೆಸಿದ್ದಾರೆ. ಆಗ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದರಿಂದ ಆರೋಪಿ ಪರಾರಿಯಾಗಿದ್ದಾನೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಘಟನೆ ನಂತರ ಕೋವಿಡ್ ಸೋಂಕಿತರ ಸಂಬಂಧಿಕರು ಜಿಮ್ಸ್ ಆಸ್ಪತ್ರೆಯ ಮುಂಭಾಗದಲ್ಲಿ ಜಮಾವಣೆಗೊಂಡು ಸೂಕ್ತ ರಕ್ಷಣೆ ನೀಡಲು ಆಗ್ರಹಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬ್ರಹ್ಮಪೂರ ಪೊಲೀಸರು ಜಿಮ್ಸ್ ಆಸ್ಪತ್ರೆಗೆ ದೌಡಾಯಿಸಿ ಘಟನೆ ವಿವರ ಪಡೆದಿದ್ದಾರೆ.

ಅದಾದ ಬಳಿಕ ಖಾಸಗಿ ಅಂಬುಲೆನ್ಸ್ ಚಾಲಕ್ ಪಿಂಟು ಈ ಕೃತ್ಯ ನಡೆಸಿರುವುದಾಗಿ ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಕಾಮುಕ ಆರೋಪಿ ಪಿಂಟುನನ್ನು ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.