Recent Posts

Sunday, January 19, 2025
ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಟಿವಿ ಸಂದರ್ಶನದ ವಿಡಿಯೋವೊಂದರ ಆಡಿಯೋ ವಿರೂಪಗೊಳಿಸಿ ಪ್ರಸಾರ ಹಿನ್ನಲೆ ; ವಿವಾದಿತ ಸಾಮಾಜಿಕ ಜಾಲತಾಣದ ಹೋರಾಟಗಾರ ಸುನಿಲ್ ಬಜಿಲಕೇರಿ ಅಂದರ್..! – ಕಹಳೆ ನ್ಯೂಸ್

 ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಟಿವಿ ಸಂದರ್ಶನದ ವಿಡಿಯೋವೊಂದರ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಆರೋಪದ ಮೇರೆಗೆ ಸಾಮಾಜಿಕ ಕಾರ್ಯಕರ್ತ ಮಂಗಳೂರಿನ ಸುನಿಲ್ ಬಜಿಲಕೇರಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.


ಇವರು ಹಲವಾರು ವರ್ಷಗಳಿಂದ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದ ಸುನಿಲ್ ಕಳೆದ ಕೆಲ ವರ್ಷಗಳಿಂದ ಸ್ಥಳೀಯ ಬಿಜೆಪಿ ನಾಯಕರ ಕಾರ್ಯ ವೈಖರಿಯನ್ನು ಕಟುವಾಗಿ ಟೀಕಿಸುತಿದ್ದರು. ಅಲ್ಲದೇ ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಉದ್ಯೋಗ ನೇಮಾಕತಿ ಸಂದರ್ಭ
ಸ್ಥಳೀಯರಿಗೆ ಉದ್ಯೋಗ ಕಡೆಗಣಿಸಲಾಗಿದೆ ಎಂಬ ವಿಚಾರ ಮುನ್ನೆಲೆಗೆ ಬಂದಾಗ ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ ಇನ್ನು ಹಿಂದುತ್ವ ಅಲ್ಲ, ಬಂಧುತ್ವಕ್ಕಾಗಿ ಹೋರಾಟ ಎಂದು ಘೋಷಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಫೇಸ್ ಬುಕ್‌ನಲ್ಲಿ ಸಕ್ರಿಯವಾಗಿರುವ ಹಿಂದೂ ಸಂಘಟನೆಯ ಕಾರ್ಯಕರ್ತೆಯೊಬ್ಬರು ತಮ್ಮ ಫೇಸ್ ಬುಕ್‌ನಲ್ಲಿ ಸುನಿಲ್ ಬಜಿಲಕೇರಿಗೆ ತರಾಟೆಗೆ ತೆಗೆದುಕೊಂಡಿದ್ದರು.ಇದೇ ಯುವತಿ ಮಂಗಳೂರಿನ ಖಾಸಗಿ ಚಾನೆಲ್‌ನಲ್ಲಿ ನಡೆದ ಬಿಜೆಪಿ ರಾಜ್ಯಾಧ್ಯಕ್ಷರ ಸಂದರ್ಶನದ ವೇಳೆ ಲೈವ್ ಫೋನ್ ಇನ್ ಕರೆ
ಮಾಡಿ ನಳಿನ್ ಕುಮಾರ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ್ದರು.

ಇದಾದ ಬಳಿಕ ಸುನಿಲ್ ಬಜಿಲಕೇರಿಗೆ ತರಾಟೆಗೆ ತೆಗೆದುಕೊಂಡ ಯುವತಿಯ ಆಡಿಯೋ ವನ್ನು ಚಾನೆಲ್‌ನ ಬಿಜೆಪಿ ರಾಜ್ಯಾಧ್ಯಕ್ಷರ ಸಂದರ್ಶನಕ್ಕೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಲಾಗಿತ್ತು.

ಯುವತಿ ಲೈವ್ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾಳೆ ಎಂಬ ರೀತಿಯಲ್ಲಿ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರವಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಸುನಿಲ್ ಬಜಿಲಕೇರಿಯನ್ನು ಬಂಧಿಸಿದ್ದಾರೆ.