Friday, November 22, 2024
ಸುದ್ದಿ

ಮುಂಬೈನಲ್ಲಿ ಭಾರಿ ಮಳೆ: ಬಸ್‌ – ರೈಲು ಸೇವೆ ಸ್ಥಗಿತ, ಸಾರ್ವಜನಿಕರ ಪರದಾಟ-ಕಹಳೆ ನ್ಯೂಸ್

ಮುಂಬೈ: ಮಹಾರಾಷ್ಟ್ರದ‌ಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಹಲವೆಡೆ ಬಸ್‌, ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸಾರ್ವಜನಿಕರು ಪರದಾಡುತ್ತಿದ್ದಾರೆ.

ರೈಲು ಹಳಿಗಳು ನೀರಿನಿಂದ ಜಲಾವೃತಗೊಂಡಿರುವ ಕಾರಣಕ್ಕೆ ದಾದರ್‌ ಮತ್ತು ಕುರ್ಲಾ ನಿಲ್ದಾಣದ ನಡುವಿನ ಉಪನಗರ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಕೇಂದ್ರ ರೈಲ್ವೆ ವಕ್ತಾರರು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

‘ಮುಂಬೈ, ಥಾಣೆ, ಪಾಲ್ಘರ್, ರಾಯಗಡ್ ಮತ್ತು ರತ್ನಾಗಿರಿ ಜಿಲ್ಲೆಗಳಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಬಾರಿ ಮಳೆಯಾಗಲಿದ್ದು, ಈಗಾಗಲೇ ಆರೇಂಜ್ ಆಲರ್ಟ್‌ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹಲವಡೆ ಬಸ್‌ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಮುಂಬೈನ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮೂರು ಗಂಟೆಗೂ ಹೆಚ್ಚು ಕಾಲ ಮಳೆಯಾಗಲಿದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿತ್ತು.