Friday, November 22, 2024
ಸುದ್ದಿ

ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಆರ್ಟಿಕಲ್ 370 ಮರು ಸ್ಥಾಪನೆಯ ಬಗ್ಗೆ ಪರಿಶೀಲನೆ ; ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿಕೆಗೆ ವ್ಯಾಪಕ ಖಂಡನೆ‌ | ದೇಶಭಕ್ತರ ಆಕ್ರೋಶ – ಕಹಳೆ ನ್ಯೂಸ್

ನವದೆಹಲಿ:ಜೂ 12 : ಒಂದೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ಮರು ಸ್ಥಾಪನೆಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಸೋಷಿಯಲ್ ಮೀಡಿಯಾ ಕ್ಲಬ್‌ಹೌಸ್ ಚಾಟ್‌ನಲ್ಲಿ ನೀಡಿದ್ದಾರೆ ಎಂಬ ಹೇಳಿಕೆ ಸೋರಿಕೆಗೊಂಡಿದ್ದು ಇದು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.‘ಕ್ಲಬ್‌ಹೌಸ್’ ಚಾಟ್‌ನಲ್ಲಿ ಆರ್ಟಿಕಲ್ 370ರ ವಿಚಾರವಾಗಿ ಪಾಕಿಸ್ತಾನಿ ಪತ್ರಕರ್ತನೆಂದು ಎನ್ನಲಾಗುತ್ತಿರುವ ವ್ಯಕ್ತಿಯೊಬ್ಬ ದಿಗ್ವಿಜಯ್ ಸಿಂಗ್ ಜತೆ ಪ್ರಶ್ನೆ ಕೇಳಿದ್ದಾರೆ ಎಂದು ಹೇಳಲಾಗುತ್ತಿದೆ ಅತ “ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಆರ್ಟಿಕಲ್
370ಯನ್ನು ಮತ್ತೆ ಜಾರಿಗೊಳಿಸಲಾಗುವುದೇ ? ಎಂದು ಕೇಳಿದ್ದಾನೆ.

ಇದಕ್ಕೆ ಪ್ರತಿಕ್ರಿಯಿಸಿದ ದಿಗ್ವಿಜಯ್ ಸಿಂಗ್ “ಆರ್ಟಿಕಲ್ 370 ರದ್ದತಿ ಹಾಗೂ ಜಮ್ಮು-ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಮಾಡಿರುವುದು ಅತ್ಯಂತ ಬೇಸರದ ಸಂಗತಿ. ಕಾಂಗ್ರೆಸ್ ಪಕ್ಷ ಈ ಬಗ್ಗೆ ಖಂಡಿತವಾಗಿಯೂ ಮರುಪರಿಶೀಲನೆ ನಡೆಸಲಿದೆ ಎಂದು ಹೇಳಿರುವ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಿಗ್ವಿಜಯ್ ಸಿಂಗ್‌ರ ಈ ಹೇಳಿಕೆಗೆ ಬಿಜೆಪಿ ನಾಯಕರು ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆಯ ಮೂಲಕ ದಿಗ್ವಿಜಯ್ ಸಿಂಗ್ ಭಾರತದ ವಿರುದ್ಧ ಮಾತನಾಡುತ್ತಾರೆ ಹಾಗೂ ಪಾಕಿಸ್ತಾನದ ಜೊತೆ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದೆ.ಕ್ಲಬ್ ಹೌಸ್ ನಲ್ಲಿ ದಿಗ್ವಿಜಯ ಸಿಂಗ್ ಯಾರೊಂದಿಗೆ ಚರ್ಚಿಸುತ್ತಿದ್ದರೋ ಅವರು ಪಾಕಿಸ್ತಾನಿ ಮೂಲದ ಪತ್ರಕರ್ತ ಎಂದು ಬಿಜೆಪಿ ಆರೋಪಿಸಿದ್ದು, ಸಿಂಗ್ ಅವರ ಹೇಳಿಕೆ ಬಗ್ಗೆ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಸ್ಪಷ್ಟನೆ ನೀಡಬೇಕೆಂದು ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆಗ್ರಹಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ತಮ್ಮ ವಿರುದ್ಧ ಆರೋಪ ಮಾಡಿರುವುದಕ್ಕೆ ಸಿಂಗ್, “ಈ ಅನಕ್ಷರಸ್ಥ ಜನರಿಗೆ ಬಹುಶಃ ಪರಿಗಣಿಸುತ್ತೇವೆ ಹಾಗೂ ಖಂಡಿತವಾಗಿಯೂ ಮಾಡುತ್ತೇವೆ ಎಂಬುದಕ್ಕೆ ವ್ಯತ್ಯಾಸ ಗೊತ್ತಿಲ್ಲ’ ಎಂದು ತೀಕ್ಷ್ಮ ಪ್ರತಿಕ್ರಿಯೆ ನೀಡಿದ್ದಾರೆ