Sunday, January 19, 2025
ರಾಜಕೀಯ

ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ದುಷ್ಕರ್ಮಿಗಳಿಂದ ಬೆಂಕಿ – ಕಹಳೆ ನ್ಯೂಸ್

ಕೋಲಾರ: ವಿಧಾನಸಭೆ ಚುನಾವಣೆ ಕಾವು ಏರತೊಡಗಿರುವಂತೆಯೇ ಕೋಲಾರದಲ್ಲಿ ದ್ವೇಷದ ರಾಜಕಾರಣ ಶುರುವಾಗಿದೆ.

ತಡರಾತ್ರಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದು ಬಿ.ಜೆ.ಪಿ. ಅಭ್ಯರ್ಥಿ ಕಾರಿಗೆ ಬೆಂಕಿ ಹಚ್ಚಿದ್ದಾರೆ. ಕೋಲಾರದ ಕಠಾರಿಪಾಳ್ಯದಲ್ಲಿ ಬಿ.ಜೆ.ಪಿ. ಅಭ್ಯರ್ಥಿ ಓಂಶಕ್ತಿ ಚಲಪತಿ ಅವರ ಮನೆ ಮುಂದೆ ನಿಲ್ಲಿಸಲಾಗಿದ್ದ ಇನ್ನೋವಾ ಮತ್ತು ಮಾರುತಿ 800 ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋಲಾರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು