Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

” ಮಾಡಿದ್ದುಣ್ಣೋ ಮಹಾರಾಯ…! ” ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ನಿರಂತರ ಅಪಪ್ರಚಾರ ; ಕೆ. ಸೋಮನಾಥ ನಾಯಕ್ ಗೆ 3 ತಿಂಗಳು ಜೈಲು ಶಿಕ್ಷೆ..! – ಕಹಳೆ ನ್ಯೂಸ್

ಬೆಳ್ತಂಗಡಿ(ಜೂ.17): ನ್ಯಾಯಾಲಯದ ಪ್ರತಿಬಂಧಕಾಜ್ಞೆ ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡಿದ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌ಗೆ 3 ತಿಂಗಳ ಸಜೆಯನ್ನು ಬೆಳ್ತಂಗಡಿ ನ್ಯಾಯಾಲಯ ಪುನರುಚ್ಚರಿಸಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರದಿಂದ ದಾಖಲಿಸಲ್ಪಟ್ಟಮೂಲ ದಾವೆ ನಂಬರ್‌ 226/2013ರಲ್ಲಿ ಗುರುವಾಯನಕೆರೆಯ ನಾಗರಿಕ ಸೇವಾ ಟ್ರಸ್ಟ್‌ ಅಧ್ಯಕ್ಷ ಕೆ. ಸೋಮನಾಥ ನಾಯಕ್‌, ಇತರರ ವಿರುದ್ಧ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಹೆಗ್ಗಡೆ ಅವರ ಕುಟುಂಬ ಹಾಗೂ ಸಂಸ್ಥೆಗಳ ಗೌರವಕ್ಕೆ ಹಾನಿಯಾಗುವ ಹೇಳಿಕೆ, ಸುದ್ದಿ ಅಥವಾ ಆರೋಪ ಮಾಡದಂತೆ ಬೆಳ್ತಂಗಡಿ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಪ್ರತಿಬಂಧಕಾಜ್ಞೆ ಜಾರಿಗೊಳಿಸಿತ್ತು. ಆ ಆದೇಶ ಪದೇ ಪದೆ ಉಲ್ಲಂಘನೆಯಾಗುತ್ತಿದ್ದ ಕಾರಣ ಮತ್ತೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಕೋರ್ಟ್‌ ಹಿಂದೆ 2 ಬಾರಿ ಸೋಮನಾಥ ನಾಯಕ್‌ಗೆ ಜೈಲು ಶಿಕ್ಷೆ ವಿಧಿಸಿ ಆದೇಶಿಸಿತ್ತು. ಇದರ ವಿರುದ್ಧ ಸೋಮನಾಥ ನಾಯಕ್‌ ಸಲ್ಲಿಸಿದ್ದ ಮೇಲ್ಮನವಿಯಲ್ಲಿ ಪ್ರಕರಣ ಹೆಚ್ಚುವರಿ ತನಿಖೆಗೆ ಮೂಲ ಕೋರ್ಟ್‌ಗೆ ಮರುರವಾನಿಸಲ್ಪಟ್ಟಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಬಂಧ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಜೂ.8ರಂದು ಅಂತಿಮ ಆದೇಶ ಹೊರಡಿಸಿ, ಹಿಂದಿನ ತೀರ್ಪನ್ನೇ ಪುನರುಚ್ಚರಿಸಿದ್ದಾರೆ. 3 ತಿಂಗಳ ಜೈಲುಶಿಕ್ಷೆ ಅಲ್ಲದೆ ಸ್ಥಿರಾಸ್ತಿ ಮುಟ್ಟುಗೋಲು ಹಾಕಿ ಶ್ರೀ ಕ್ಷೇತ್ರಕ್ಕೆ 4.50 ಲಕ್ಷ ರು. ಪರಿಹಾರವಾಗಿ ನೀಡಬೇಕು. ಪ್ರಕರಣದಲ್ಲಿ ಕೋರ್ಟ್‌ ಅವಧಿ ದುರುಪಯೋಗಪಡಿಸಿ ಮತ್ತೆ ಶ್ರೀ ಕ್ಷೇತ್ರಕ್ಕೆ ಉಪಟಳ ನೀಡಿದ್ದಕ್ಕೆ ಹೆಚ್ಚುವರಿ ಪರಿಹಾರವಾಗಿ 2,000 ರು. ನೀಡುವಂತೆಯೂ ಆದೇಶಿಸಿದೆ ಎಂದು ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು