Recent Posts

Monday, January 20, 2025
ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜಕೀಯರಾಜ್ಯಸುದ್ದಿ

ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ; ಮಾಜಿ ಸಚಿವ ರೇವಣ್ಣ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು – ಕಹಳೆ ನ್ಯೂಸ್

ಪುತ್ತೂರು, ಜೂ 19 : ಖಾಸಗಿ ನರ್ಸಿಂಗ್ ಹೋಮ್​ಗಳ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದ ಮಾಜಿ ಸಚಿವ , ಜೆಡಿಎಸ್ ನ ಹಿರಿಯ ನಾಯಕ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ದಾಖಲಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಹಾಸನ‌ ಜಿಲ್ಲೆಯಲ್ಲಿ ಇತ್ತೀಚೆಗೆ ರೇವಣ್ಣ ಖಾಸಗಿ ನರ್ಸಿಂಗ್ ಹೋಂಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ” ಖಾಸಗಿ ನರ್ಸಿಂಗ್ ಹೋಂಗಳು ಕೋವಿಡ್ ಸಾಂಕ್ರಾಮಿಕ ರೋಗದ ಕಷ್ಟದ ಸಮಯದಲ್ಲಿಯೂ ದಂಧೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಸಾರ್ವಜನಿಕರನ್ನು ಪ್ರಚೋದಿಸುತ್ತೇಬೆ ಮತ್ತು ಜನರಿಗೆ ಹೇಳಿ ಹೊಡೆಸುತ್ತೇನೆ, ಈ ಆಸ್ಪತ್ರೆಗಳ ವಿರುದ್ಧ ಡಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕಾಗಿದೆ. ಇಲ್ಲದಿದ್ದರೆ, ನಾನು ಸುಮ್ಮನಿರುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಟೌನ್ ಪೊಲೀಸ್ ಠಾಣೆ ದೂರು ನೀಡಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಖಾಸಗಿ ನರ್ಸಿಂಗ್ ಹೋಮ್​ಗಳು ಸುಲಿಗೆ ನಡೆಸುವುದನ್ನು ನಿಲ್ಲಿಸದಿದ್ದರೆ ಜನರನ್ನು ಕಳಿಸಿ ಹೊಡೆಸುತ್ತೇವೆ ಎಂದು ಸಹ ಹೇಳಿದ್ದ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಈ ಬೆನ್ನಲ್ಲೇ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್​ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.