ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಬೆ.7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ; ಜಿಲ್ಲಾಧಿಕಾರಿಗಳ ಆದೇಶದಲ್ಲೇನೇನಿದೆ..!? ಯಾವುದೆಲ್ಲಾ ಓಪನ್..!? ಯಾವುದೆಲ್ಲಾ ಬಂದ್..!? – ಕಹಳೆ ನ್ಯೂಸ್
ಮಂಗಳೂರು, ಜೂ. 20 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜೂನ್.21ರಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 1ರವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗಿದ್ದು, ಈ ಆದೇಶ ಜುಲೈ 5ರ ಸಂಜೆಯವರೆಗೂ ವಿಸ್ತರಣೆಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ.
ಜಿಲ್ಲೆಯಾದ್ಯಂತ ಅನ್‌ಲಾಕ್ 1.0 ಭಾಗವಾಗಿ ಅಗತ್ಯವಸ್ತು ಖರೀದಿ ಅವಧಿ ವಿಸ್ತರಣೆ ಮಾಡಲಾಗಿದ್ದು,ಆಹಾರ, ದಿನಸಿ, ಹಣ್ಣು-ತರಕಾರಿ, ಮೀನು-ಮಾಂಸ, ಬೀದಿಬದಿ ವ್ಯಾಪಾರ ಮತ್ತು ಮದ್ಯ ಪಾರ್ಸೆಲ್ ಗಷ್ಟೇ ಮಧ್ಯಾಹ್ನ 1ರವರೆಗೆ ಅವಕಾಶ ನೀಡಲಾಗಿದೆ.
ಇನ್ನು ಜಿಲ್ಲೆಯಾದ್ಯಂತ ರಾತ್ರಿ.7ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದ್ದು, ವಾರಾಂತ್ಯದ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆ. 7ರವರೆಗೆ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಯಾವುದೇ ಬಸ್ ಸಂಚಾರಕ್ಕೂ ಅನುಮತಿ ನೀಡಲಾಗಿಲ್ಲ. ಆದರೆ ಅಟೋ ರಿಕ್ಷಾ ಮತ್ತು ಟ್ಯಾಕ್ಸಿ ಇಬ್ಬರು ಪ್ರಯಾಣಿಕರ ಸಹಿತ ಸಂಚರಿಸಬಹುದು ಎಂದು ಆದೇಶಿಸಲಾಗಿದೆ.
ಇನ್ನು ನಿರ್ಮಾಣ ಚಟುವಟಿಕೆ ಮತ್ತು ಸ್ಟೀಲ್, ಸಿಮೆಂಟ್ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.