ಬಂಟ್ವಾಳ: ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ, ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು. ಕಾರ್ಯಚರಣೆ ವೇಳೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ಎಂಬ ಇಬ್ಬರು ತಲೆಮರೆಸಿಕೊಂಡಿದ್ದಾರೆ.
ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿಲಾಗಿದೆ. ಬಂಟ್ವಾಳ ತಾಲೂಕಿನ ವೀರಕಂಬ ರಕ್ಷಿತಾ ಅರಣ್ಯದಿಂದ ಆರೋಪಿಗಳು ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಗಂಧದ ಮರಗಳನ್ನು ಕಡಿದು ತುಂಡು ಮಾಡಿ ಮಾರಾಟ ಮಾಡಲು ತಯಾರಿ ನಡೆಸಿದ್ದರು. ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಮಿಂಚಿನ ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂದಿಸಿದ್ದಾರೆ. ಅಂದಾಜು ಮೂರು ಲಕ್ಷ ಮೌಲ್ಯದ ಗಂಧದ ಮರದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇನ್ನು ಸ್ಥಳಕ್ಕೆ ಬೇಟಿ ನೀಡಿದ ಸಂಧರ್ಭದಲ್ಲಿ ಆರೋಪಿಗಳು ಕಾಡು ಪ್ರಾಣಿಯಾದ ಉಡವೊಂದನ್ನು ಹಿಡಿದು ಪದಾರ್ಥ ಮಾಡಲು ತಯಾರಿ ನಡೆಸುತ್ತಿದ್ದು, ಅ ಪ್ರಾಣಿಯನ್ನು ಕೂಡ ರಕ್ಷಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಆರೋಪಿಗಳ ಬಂಧಿಸಿದ ಅರಣ್ಯಾಧಿಕಾರಿಗಳು ವಿಚಾರಣೆ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾರ್ ಅವರ ಮಾರ್ಗದರ್ಶನದಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಯಶೋಧರ, ಪ್ರೀತಮ್ ಎಸ್, ಬಸಪ್ಪ ಹಲಗಾರ್, ಅರಣ್ಯ ರಕ್ಷಕರಾದ ಜಿತೇಶ್, ಶೋಭಿತ್, ದಯಾನಂದ, ರವಿ, ರೇಖಾ, ಅರಣ್ಯ ವೀಕ್ಷಕರಾದ ಪ್ರವೀಣ್, ಚಾಲಕರಾದ ಜಯರಾಮ್ ಪಾಲ್ಗೊಂಡಿದ್ದರು.