Sunday, January 19, 2025
ದಕ್ಷಿಣ ಕನ್ನಡಮೂಡಬಿದಿರೆರಾಜಕೀಯ

ಪೆರ್ಮುದೆ ಗ್ರಾ.ಪಂ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಚಾಲನೆ – ಕಹಳೆ ನ್ಯೂಸ್

ಪೆರ್ಮುದೆ
ಪೆರ್ಮುದೆ ಗ್ರಾಮ ಪಂಚಾಯತ್‌ನ ಕುತ್ತೆತ್ತೂರು ಗ್ರಾಮದ ಕುಕ್ಕುದ ಕಟ್ಟೆ ಬಳಿ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗೆ ಮೂಡಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಗುದ್ದಲಿ ಪೂಜೆ ನೆರವೇರಿದರು.


ಕೇಂದ್ರ ಸರಕಾರದ ಜಲ ಜೀವನ್ ಮಿಷನ್ ಯೋಜನೆಯ ಮೂಲಕ ಕುತ್ತೆತ್ತೂರು ಮತ್ತು ಪೆರ್ಮುದೆ ಗ್ರಾಮದ ಗ್ರಾಮಸ್ಥರ ಕುಡಿಯುವ ನೀರಿನ ಸಮಸ್ಯೆಯನ್ನು ಹೋಗಲಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಕಾರದಲ್ಲಿ ಪೆರ್ಮುದೆ ಗ್ರಾಮ ಪಂಚಾಯತ್‌ಗೆ 1.86 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರು ಯೋಜನೆ ರೂಪಿಸಿದ್ದು 2024 ರ ಒಳಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಮನೆಗಳಿಗೆ ಕಾರ್ಯಾತ್ಮಕ ನಳ ಸಂಪರ್ಕ ನೀಡಿ ಶೇಕಡಾ 100 ಗುರಿಯನ್ನು ಸಾಧಿಸುವಂತೆ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಪ್ರಸಾದ್ ಅಂಚನ್ ಈ ಯೋಜನೆಯಲ್ಲಿ 972 ಮನೆಗಳಿಗೆ ನೀರಿನ ಸಂಪರ್ಕವನ್ನು ಈ ಯೋಜನೆಯ ಮುಖಾಂತರ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸದಸ್ಯರುಗಳಾದ ಶ್ರೀ ನವೀನ್ ಶೆಟ್ಟಿ, ಜೋರ್ಜ್ ಪೆರ್ನಾಂಡೀಸ್, ಭಾರತಿ, ಪುಷ್ಪ, ಮೀನಾ, ಉಮೇಶ್ ಎಸ್. ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀ ಮತಿ ಶೈಲಜಾ, ಜಿಲ್ಲಾ ಪಂಚಾಯತ್ ಇಂಜಿನಿಯರ್ ಶ್ರೀ ವಿಶ್ವನಾಥ್, ಕಾರ್ಯದರ್ಶಿ ಶ್ರೀ ನಾಗೇಶ್ ಸುವರ್ಣ, ಭೂ ನ್ಯಾಯ ಮಂಡಳಿಯ ಸದಸ್ಯರಾದ ಶ್ರೀ ಜಯಂತ್ ತೋಕೂರು, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ಶೆಟ್ಟಿ, ಗುತ್ತಿಗೆದಾರಾದ ಶ್ರೀ ಅನಿಲ್ ಹೆಗ್ಡೆ, ಸುಧಾಕರ್ ಕಾಮತ್, ಪ್ರದೀಪ್ ಸುವರ್ಣ, ಮಂಜು ಪ್ರಸಾದ್, ಮಾಜಿ ಪಂಚಾಯತ್ ಸದಸ್ಯ ಶ್ರೀ ಜಗನ್ನಾಥ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು