Recent Posts

Monday, January 20, 2025
ಸುದ್ದಿಸುಬ್ರಹ್ಮಣ್ಯ

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ – ಕಹಳೆ ನ್ಯೂಸ್

ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ ಹದಿನೆಂಟು ವರ್ಷ ಮೇಲ್ಪಟ್ಟ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ವ್ಯಾಕ್ಸಿನ್ ಅಭಿಯಾನ ಕಾರ್ಯಕ್ರಮ ಮಂಗಳವಾರ ನಡೆಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಯುವ ರೆಡ್ ಕ್ರಾಸ್ ರೇಂಜರ್ ರೋವರ್ಸ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇದರ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಕಾರ್ಯಕ್ರಮ ನಡೆಯಿತು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇದರಲ್ಲಿ ಸುಮಾರು ಮುನ್ ನೂರ ಐವತ್ತು ಮಂದಿ ವಿದ್ಯಾರ್ಥಿಗಳು ಮತ್ತು ಕಾಲೇಜಿನ ಉಪನ್ಯಾಸಕರು ಸಿಬ್ಬಂದಿ ವರ್ಗದವರು ಲಸಿಕೆಯನ್ನು ಪಡೆದರು ಕಾರ್ಯಕ್ರಮಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಮೋಹನ್ ರಾಂ ಸುಳ್ಳಿ ಚಾಲನೆ ನೀಡಿದರು.

ಸದಸ್ಯರಾದ ಪ್ರಸನ್ನ ದರ್ಬೆ, ವನಜಾ ವಿ ಭಟ್ ,ಶೋಭಾ ಗಿರಿಧರ್ ,ಪ್ರಾಂಶುಪಾಲ ಡಾಕ್ಟರ್ ಗೋವಿಂದ ಎನ್ ಎಸ್ ಕಾರ್ಯಕ್ರಮ ಸಂಯೋಜಕರಾದ ಡಾಕ್ಟರ್ ಪ್ರಸಾದ್ ಎನ್ ಉಪನ್ಯಾಸಕರಾದ ಶ್ರೀಲತಾ ಕಮಿಲಾ ,ಲತಾ ಬಿ ಟಿ, ವಿನ್ಯಾಸ್ ಹೊಸೊಳಿಕೆ ,ರಮಾನಾಥ್ ಆರತಿ, ನಮಿತಾ ಮೇಲ್ನಾಡ್, ಆರೋಗ್ಯ ಕೇಂದ್ರದ ಸಿಬ್ಬಂದಿ ಹೇಮಲತಾ ಕರುಣಾಕರ್ ಮೊದಲಾದವರು ಉಪಸ್ಥಿತರಿದ್ದರು.