Sunday, January 19, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ; ಹಿಂದು ಜಾಗರಣ ವೇದಿಕೆಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು – ಕಹಳೆ ನ್ಯೂಸ್

ಕಡಬ : ರಾಮಕುಂಜ ಚೆಕ್ ಪೋಸ್ಟ್ ಬಳಿ ಶೆಡ್ ಧ್ವಂಸ ಮಾಡಿದವರ ಮೇಲೆ ಯಾವುದೇ ಒತ್ತಡಕ್ಕೆ ಮಣಿಯದೇ ಕೇಸ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದು ಜಾಗರಣ ವೇದಿಕೆ ಕಡಬ ತಾಲೂಕು ವತಿಯಿಂದ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಿಗೆ ದೂರು ನೀಡಿದೆ‌.

ಸಾರ್ವಜನಿಕರ ರಕ್ಷಣೆಗಾಗಿ ದುಡಿಯುವ ಪೋಲಿಸರ ಮೇಲೆ ಹಲ್ಲೆಗೆ ಮುಂದಾಗಿದ್ದು ಮತ್ತು ತಾತ್ಕಾಲಿಕ ಶೆಡ್ ಧ್ವಂಸ ಮಾಡಿರುವುದು ಅತ್ಯಂತ ಖೇದಕರ ಸಂಗತಿ,ಇಂತಹ ಸಮಾಜಘಾತುಕ ಶಕ್ತಿಗಳು ಸಮಾಜದಲ್ಲಿ ಮತ್ತೆ ತಲೆ ಎತ್ತದಂತೆ ಕ್ರಮ ಕೈಗೊಳ್ಳಲು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯವರಲ್ಲಿ ಮನವಿ ಮಾಡಿಕೊಂಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಸಂಧರ್ಭದಲ್ಲಿ ದಕ್ಷಿಣ ಪ್ರಾಂತ ಸಂಪರ್ಕ ಪ್ರಮುಖ್ ರವಿರಾಜ್ ಶೆಟ್ಟಿ, ದಕ್ಷಿಣ ಪ್ರಾಂತ ಉಪಾಧ್ಯಕ್ಷ ಕಿಶೋರ್ ಕುಮಾರ್,ಪುತ್ತೂರು ಜಿಲ್ಲಾ ಅಧ್ಯಕ್ಷ ಜಗದೀಶ್ ನೆತ್ತರಕೆರೆ, ಜಿಲ್ಲಾ ಉಪಾಧ್ಯಕ್ಷ ವೆಂಕಟರಮಣ ಕುತ್ಯಾಡಿ,ಕಡಬ ತಾಲೂಕು ಅಧ್ಯಕ್ಷರಾದ ಮಲ್ಲೇಶ್ ಆಲಂಕಾರು,ಪ್ರಧಾನ ಕಾರ್ಯದರ್ಶಿ ರವೀಂದ್ರದಾಸ್ ಪೂಂಜಾ,ಕಾರ್ಯದರ್ಶಿ ಹರೀಶ್ ಆಲಂಕಾರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು