Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ಏಕೈಕ ಆಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಹಾನಿ ; ರಾಷ್ಟ್ರದ್ರೋಹಿ ಕೃತ್ಯವೆಸಗಿದ ಕಿಡಿಗೇಡಿಗಳು ಯಾರು..!? – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಕಿಲ್ಲೇ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಗೆ ಹಾನಿ ಆಗಿರುವ ಘಟನೆ ಜು.6ರಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.

ಪುತ್ತೂರಿನ ನಟ್ಟೋಜ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮುಂದಾಳತ್ವದ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಭಾರತೀಯ ವೀರ ಯೋಧರ ಸ್ಮರಣಾರ್ಥ 2017 ರಲ್ಲಿ ಲೋಕಾಪರ್ಣೆಗೊಂಡ ಅಮರ್ ಜವಾನ್ ಜ್ಯೋತಿಗೆ ಕಿಡಿಗೇಡಿಗಳು ಹಾನಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು ಬೆಳಿಗ್ಗೆ ಅಂಬಿಕಾ ವಿದ್ಯಾಸಂಸ್ಥೆಯ‌ ಮೆನೇಜರ್ ರವೀಂದ್ರರವರು ಸ್ಮಾರಕದ ಶುಚಿತ್ವಕ್ಕೆ ತೆರಳಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಕುರಿತು ಪುತ್ತೂರು ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.