ಬೆಂಗಳೂರು, ಜು 06 :ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಕರ್ನಾಟಕ ಸೇರಿ 8 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನ ನೇಮಕ ಮಾಡಲಾಗಿದ್ದು, ಕರ್ನಾಟಕ ನೂತನ ರಾಜ್ಯಪಾಲರಾಗಿ ತಾವರ್ ಚಂದ್ ಗೆಹ್ಲೋಟ್ ನೇಮಕಕ್ಕೆ ರಾಷ್ಟ್ರಪತಿ ರಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ. ತಾವರ್ ಚಂದ್ ಗೆಹ್ಲೋಟ್ ಹಾಲಿ ಕೇಂದ್ರ ಸಮಾಜಕಲ್ಯಾಣ ಸಚಿವರಾಗಿದ್ದರು.
84 ವರ್ಷದ ವಜೂಬಾಯಿ ವಾಲಾ ಅವರು 2014ರ ಸೆಪ್ಟೆಂಬರ್ನಲ್ಲಿ ಕರ್ನಾಟಕದ 18ನೆಯ ರಾಜ್ಯಪಾಲರಾಗಿ ನೇಮಕಗೊಂಡಿದ್ದರು. ಇದೀಗ 19ನೇ ರಾಜ್ಯಪಾಲರಾಗಿ ಥಾವರ್‌ಚಂದ್ ಗೆಹ್ಲೋಟ್ ನೇಮಕವಾಗಿದ್ದಾರೆ