Recent Posts

Monday, January 20, 2025
ಸುದ್ದಿ

ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಪೊಲೀಸರ ತಡೆ, ಕಮಿಷನರ್ ವಾರ್ನ್…! – ಕಹಳೆ ನ್ಯೂಸ್

ಮಂಗಳೂರು:ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ಹಿರ್ಗಾನ್ ಎಂಬುವವರ ಮೇಲೆ ಕಾರ್ಕಳ ಪೊಲೀಸರು ನಡೆಸಿರೋ ದೌರ್ಜನ್ಯವನ್ನು ಖಂಡಿಸಿ ಮಂಗಳೂರು ನಗರದ ಎಸ್ ಪಿ ಕಚೇರಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್ ಕಾರ್ಯಕರ್ತರಿಗೆ ಮಂಗಳೂರು ಕಮಿಷನರ್ ಅನುಮತಿ ಇಲ್ಲದೇ ಹಾಗೂ ಕೋವಿಡ್ ನಿಯಮ ಉಲ್ಲಂಘನೆ ಮಾಡಿ ಪ್ರತಿಭಟನೆ ನಡೆಸದಂತೆ ಎಚ್ಚರಿಕೆ ನೀಡಿದ್ದಾರೆ.ಈ ವೇಳೆ ಸ್ಥಳಕ್ಕೆ ಅಗಮಿಸಿದ ಕೆಪಿಸಿಸಿ ವಕ್ತಾರ ಐವನ್ ಡಿಸೋಜ ಕಾರ್ಯಕರ್ತರನ್ನು ಮನವೊಲಿಸಿ ಈ ಅಮಾನವೀಯ ಘಟನೆಯ ಬಗ್ಗೆ ಶೀಘ್ರ ತನಿಖೆಯಾಗಬೇಕು ಹಾಗೂ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಬೇಕೆಂದು ಒತ್ತಾಯಿಸಿ ಬಳಿಕ ಪೊಲೀಸ್ ಮಹಾನೀರಿಕ್ಷಕರಿಗೆ ಮನವಿ ಸಲ್ಲಿಸಲಾಯಿತು.  ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಕಾಂಗ್ರೆಸ್ ಯುವ ಮುಖಂಡರಾದ ಸೊಹೈಲ್ ಕಂದಕ್, ಅಶಿತ್ ಪಿರೇರಾ, ದಿಕ್ಷೀತ್ ಅತ್ತಾವರ, ಅರೀಫ್ ಬಾವಾ ಬಂದರ್, ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು

ಜಾಹೀರಾತು
ಜಾಹೀರಾತು
ಜಾಹೀರಾತು