Sunday, January 19, 2025
ಕಾಸರಗೋಡು

ಕೇರಳ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸೇರಿದಂತೆ ಬಿಜೆಪಿ ನಾಯಕರ ಮೇಲೆ ಸಿಪಿಎಂ ಮುಖಂಡರ ನಿರ್ದೇಶನದಂತೆ ಸುಳ್ಳು ಮೊಕದ್ದಮೆ ; ಕಾಸರಗೋಡಿನಲ್ಲಿ ನಡೆದ ಬಿಜೆಪಿ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ಆಕ್ರೋಶ – ಕಹಳೆ ನ್ಯೂಸ್

ಕಾಸರಗೋಡು, ಜು14 : ಬಿಜೆಪಿ ರಾಜ್ಯಾಧ್ಯಕ್ಷ ಕೆ. ಕೆ. ಸುರೇಂದ್ರನ್ ಹಾಗೂ ಬಿಜೆಪಿ ನಾಯಕರ ಮೇಲೆ ಸುಳ್ಳು ಮೊಕದ್ದಮೆ ಗಳನ್ನು ಹೂಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬುಧವಾರ ಜಾಥಾ ನಡೆಸಲಾಯಿತು. ಪ್ರತಿಭಟನೆಯನ್ನು ಜಿಲ್ಲಾಧ್ಯಕ್ಷ ಕೆ . ಶ್ರೀಕಾಂತ್ ಉದ್ಘಾಟಿಸಿದರು.

ಸಿಪಿಎಂ ಪಕ್ಷದ ನಾಯಕರ ನಿರ್ದೇಶನದಂತೆ ಬಿಜೆಪಿ ನಾಯಕರ ವಿರುದ್ಧ ಮೊಕದ್ದಮೆಗಳನ್ನು ಹೂಡಲಾಗುತ್ತಿದ್ದು , ಮಂಜೇಶ್ವರ ದ ಬಿ ಎಸ್ಪಿ ಅಭ್ಯರ್ಥಿಗೆ ಬಿಜೆಪಿ ನಾಯಕರು ಹಣ ನೀಡಿಲ್ಲ, ಬೆದರಿಕೆ ಹಾಕಿಲ್ಲ. ಹಣ ಪಡೆದುಕೊಂಡಿರುವುದಾಗಿ ಹೇಳಿಕೆ ನೀಡಿದ ಕೆ . ಸುಂದರರ ವಿರುದ್ಧ ಯಾವುದೇ ಕೇಸು ದಾಖಲಿಸಿಲ್ಲ . ಸುಳ್ಳು ಹೇಳಿಕೆಗಳನ್ನು ಆಧರಿಸಿ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಮೊಕದ್ದಮೆಗಳನ್ನು ಹೂಡಲಾಗುತ್ತಿದೆ ಎಂದು ಆರೋಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿನಾಃ ಕಾರಣ ಬಿಜೆಪಿ ಮುಖಂಡರ ವಿರುದ್ಧ ಕೇಸು ದಾಖಲಿಸಿ ಕಿರುಕುಳ ನೀಡಿದ್ದಲ್ಲಿ ತೀವ್ರ ಹೋರಾಟ ನಡೆಸುವುದಾಗಿ ಶ್ರೀಕಾಂತ್ ಮುನ್ನೆಚ್ಚರಿಕೆ ನೀಡಿದರು .

ಜಾಹೀರಾತು
ಜಾಹೀರಾತು
ಜಾಹೀರಾತು

ನ್ಯಾಯವಾದಿ ಬಾಲಕೃಷ್ಣ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ರೂಪವಾಣಿ ಆರ್.ಭಟ್, ನವೀನ್ ರಾಜ್ , ಎ . ವೇಲಾಯುಧನ್ , ಸುಧಾಮ ಗೋಸಾಡ ಮೊದಲಾದವರು ನೇತೃತ್ವ ವಹಿಸಿದ್ದರು.