Sunday, January 19, 2025
ರಾಷ್ಟ್ರೀಯಸುದ್ದಿ

ಕೋವಿಡ್ 19 ರೂಪಾಂತರ ತಳಿ ಪ್ರಕರಣ ಹೆಚ್ಚಳ ; ಮಣಿಪುರದಲ್ಲಿ ಜುಲೈ 18ರಿಂದ 10 ದಿನ ಸಂಪೂರ್ಣ ಲಾಕ್ ಡೌನ್ ಜಾರಿ – ಕಹಳೆ ನ್ಯೂಸ್

ನವದೆಹಲಿ: ಮಣಿಪುರದಲ್ಲಿ ಕೋವಿಡ್ 19 ರೂಪಾಂತರ ತಳಿ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 18ರಿಂದ ರಾಜ್ಯದಲ್ಲಿ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿಗೊಳಿಸಲು ಮಣಿಪುರ ಸರ್ಕಾರ ಶುಕ್ರವಾರ(ಜುಲೈ 16) ನಿರ್ಧರಿಸಿದೆ.

ಕೋವಿಡ್ ರೂಪಾಂತರಿ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಠಿಣ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಜುಲೈ 18ರಿಂದ ಹತ್ತು ದಿನಗಳ ಕಾಲ ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕರ್ಫ್ಯೂ ಸಂದರ್ಭದಲ್ಲಿ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲಾ ಕಾರ್ಯಚಟುವಟಿಕೆಗಳು ಬಂದ್ ಆಗಿರಲಿದೆ ಎಂದು ಮಣಿಪುರ ಮುಖ್ಯಮಂತ್ರಿ ಎನ್.ಬೀರೆನ್ ಸಿಂಗ್ ತಿಳಿಸಿದ್ದಾರೆ. ಕೇವಲ ಕೋವಿಡ್ ಲಸಿಕೆ ಪಡೆಯಲು ಮತ್ತು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ಮಾತ್ರ ಜನರಿಗೆ ಅವಕಾಶ ಕಲ್ಪಿಸಲಾಗಿದೆ. ಉಳಿದಂತೆ ಅನಾವಶ್ಯಕ ಓಡಾಟಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೋವಿಡ್ 19 ಸೋಂಕು ತಡೆಗಟ್ಟಲು ಎಲ್ಲರೂ ಸಹಕಾರ ನೀಡಬೇಕು ಎಂದು ಆರೋಗ್ಯ ಇಲಾಖೆ ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದೆ. ಕಳೆದ ಕೆಲವು ದಿನಗಳಿಂದ ಮಣಿಪುರದಲ್ಲಿ ಹೆಚ್ಚಿನ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿ ವಿವರಿಸಿದೆ.