Recent Posts

Sunday, January 19, 2025
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೇಳಿಕೆಯಲ್ಲಿ ಏನಿದೆ..? : 
ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು ವಾಟ್ಸಪ್ ನಲ್ಲಿ ಹರಿಬಿಟ್ಟಿದ್ದು, ಇದರ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್ ಕುಮಾರ್ ಕಟೀಲ್ ಅವರು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಕ್ಷಕ್ಕೆ ಮತ್ತು ಸರಕಾರಕ್ಕೆ ಕೆಟ್ಟ ಹೆಸರು ತರುವ ದೃಷ್ಟಿಯಿಂದ ಈ ಆಡಿಯೋವನ್ನು ಹರಿಬಿಟ್ಟಿದ್ದು, ತನಿಖೆ ನಡೆಸಿದರೆ ಅದರ ನಕಲಿತನ ಸಾಬೀತಾಗಲಿದೆ. ಆದ್ದರಿಂದ ತಾವು ಅದರ ಹಿಂದಿರುವ ಕಿಡಿಗೇಡಿಗಳು ಯಾರೆಂಬ ಕುರಿತು ತನಿಖೆ ನಡೆಸಲು ಒತ್ತಾಯಿಸುತ್ತಿರುವುದಾಗಿ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.