ಮಂಗಳೂರು: ಕೊರೋನಾದ ಆತಂಕದ ನಡುವೆಯು ಇಂದಿನಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಅಂತಿಮ ಹಂತದ ಪಬ್ಲಿಕ್ ಪರೀಕ್ಷೆ ಆರಂಭವಾಗುತ್ತಿದ್ದು, ಕೊವೀಡ್-19 ನಿಂದಾಗಿ ಈ ಬಾರಿಯ ಪರೀಕ್ಷೆ ವಿಶೇಷವಾಗಿ ನಡೆಯುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯ ನಂತರ ಪರೀಕ್ಷಾ ಕೊಠಡಿಗೆ ಕಳುಹಿಸಲಾಗುತ್ತಿದ್ದು, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದು, ಮತ್ತು ಸ್ಯಾನಿಟೈಜರ್ ಬಳಕೆ ಮಾಡುವುದು ಹೀಗೆ ಮುಂತಾದ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಲಾಗುತ್ತದೆ.
ಜಿಲ್ಲೆಯ 179 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 32,657 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು. ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ.
ಸೋಂಕಿತ ವಿದ್ಯಾರ್ಥಿಗಳು:
ದ.ಕ ಜಿಲ್ಲೆಯಲ್ಲಿ 9 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳು ಕೊವೀಡ್ ಕೇರ್ ಸೆಂಟರ್ ನಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ.