ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ಆನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದು, ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಹೆಚ್ಚಿನ ಜಾಗರೂಕತೆಯನ್ನು ಅನುಸರಿಸುವ ಅನಿವಾರ್ಯವಿದೆ. ಮುಂಬರುವ ದಿನಗಳಲ್ಲಿ ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಪ್ರಸ್ತುತ ರಾಜ್ಯ ಸರ್ಕಾರವು ಕೇರಳ ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಅವಲೋಕಿಸಿ ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು – ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಇಂದಿನಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದ್ದು, ಬೆಳ್ಳಗ್ಗಿನಿಂದಲೇ ಬಸ್ ಸಂಚಾರ ಆರಂಭವಾಗಿದೆ.
ಕೆ.ಎಸ್.ಆರ್.ಟಿ.ಸಿ. ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕ ಕನಿಷ್ಠ 1 ಡೋಸ್ ಪಡೆದಿರುವ ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನಗೆಟಿವ್ ವರದಿಯನ್ನು ಆಯಾ ಬಸ್ ನ ನಿರ್ವಾಹಕರು ( Bus Conductor) ಖಚಿತಪಡಿಸಕೊಳ್ಳತಕ್ಕದ್ದು.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಫರ್, ಸಾರ್ವಜನಿಕ ಅಂತರ)
ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಮಿಕ ರೋಗಗಳ ಅಧಿನಿಯಮ2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮವನ್ನು ಕೈಗೊಳ್ಳಲಾಗುವುದು ಎಂದು
ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರೋ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ…