Sunday, January 19, 2025
ಪುತ್ತೂರು

ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಆನ್‌ಲೈನ್‌ನಲ್ಲಿ ಹಿರಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ– ಕಹಳೆ ನ್ಯೂಸ್

ಪುತ್ತೂರು: ವಿದ್ಯಾರ್ಥಿಗಳ ಜೀವನದಲ್ಲಿ ೧೨ನೇ ತರಗತಿ ಎಂಬುದು ಪ್ರಮುಖ ಘಟ್ಟ. ಮುಂದಿನ ಉದ್ಯೋಗ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಯಾವ ವಿಭಾಗವನ್ನು ಆಯ್ಕೆ ಮಾಡಬೇಕು ಎಂಬುದನ್ನು ನಿರ್ಧರಿಸಬೇಕು. ಶಿಕ್ಷಣವು ದೇಶಭಕ್ತಿಯ ಶಿಸ್ತಿನ ಮತ್ತು ಉತ್ಪಾದಕ ಮಾನವಶಕ್ತಿಯನ್ನು ಸೃಷ್ಟಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಸ್ಯಾಮ್‌ಸಂಗ್ ಕಂಪನಿಯಲ್ಲಿ ಎಸೋಸಿಯೇಟ್ ಇಂಜಿನಿಯರ್ , ಇಂದೋರಿನ ಐಐಮ್ ನಲ್ಲಿ ಎಂಬಿಎಯಲ್ಲಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಯಂ. ಕುಮಾರ್ ಹೇಳಿದರು.

     
ಅವರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗಾಗಿ ಆನ್ ಲೈನ್ ವೇದಿಕೆಯ ಮೂಲಕ ನಡೆದ ಹಿರಿಯ ವಿದ್ಯಾರ್ಥಿಗಳ ಕಾರ್ಯಕ್ಷೇತ್ರದ ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ತಮ್ಮ ಅನುಭವವನ್ನು ಹಂಚಿಕೊಂಡರು. ಪ್ರಸ್ತುತ ಕ್ಯಾಲಿಫೋರ್ನಿಯಾದ ಎಪಲ್ ಕಂಪೆನಿಯಲ್ಲಿ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮತ್ತು ವಿವೇಕಾನಂದ ಕಾಲೇಜಿನ ಹಿರಿಯ ವಿದ್ಯಾರ್ಥಿ ಆಶಯ ಕೆ.ಎನ್ ಮಾತನಾಡಿ ಶಿಕ್ಷಣ ಮಾನವನ ಪ್ರಗತಿ ಆಧಾರವಾಗಿದೆ. ಇದು ಸಮಾಜದ ಹಾಗೂ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಒಂದು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪುಸ್ತಕಗಳ ಒಂದು ದೊಡ್ಡ ಸಂಖ್ಯೆಯ ಶಿಕ್ಷಣದ ಮಹತ್ವವನ್ನು ಮೇಲೆ ಬರೆಯಲಾಗಿದೆ. ವಿಜ್ಞಾನದ ವಿದ್ಯಾರ್ಥಿಗಳು ಪ್ರಯೋಗಾಲಯದಲ್ಲಿ ಮಾತ್ರ ಕೌಶಲ್ಯಭರಿತರಾಗಿದೆ ಎಲ್ಲಾ ರಂಗಗಳಲ್ಲಿಯೂ ನಿಸ್ಸೀಮರಾಗಬೇಕು. ಇದರಿಂದ ಬಹುರಾಷ್ಟ್ರೀಯ ಉದ್ದಿಮೆಗಳಲ್ಲಿಯೂ ಉನ್ನತ ಮಟ್ಟದ ಉದ್ಯೋಗವನ್ನು ಪಡೆಯಲು ಸಾಧ್ಯ ಎಂದರು. ಪ್ರಸ್ತುತ ವಾಶಿಂಗ್ಟನ್ ನ ಅಮೆಜಾನ್ ಕಂಪೆನಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿ ನವನೀಶ್ ಮಾತನಾಡುತ್ತಾ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಹಂತದಲ್ಲಿ ವಿಜ್ಞಾನ ಕಲಿಕೆಗಿಂತ ಸಂಶೋಧನೆ ಮಾಡುವಾಗ ಸ್ವಶಕ್ತಿ, ಸಾಮಥ್ರ‍್ಯದ ಕಡೆಗೆ ನಂಬಿಕೆಯಿರಬೇಕು ಎಂಜಿನಿಯರಿಂಗ್, ಎಂಬಿಬಿಎಸ್ ಮಾತ್ರವಲ್ಲದೆ ಹೇರಳ ಉದ್ಯೋಗಾವಕಾಶ ನೀಡುವ ಸಾಕಷ್ಟು ಕೋರ್ಸ್ ಗಳೂ ವಿಜ್ಞಾನ ವಿಭಾಗದಲ್ಲಿವೆ. ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದರು. ಯುಎಸ್‌ಎ ಯಲ್ಲಿ ರೊಬೋಟಿಕ್ಸ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಅಂಜನಾ ಕೆ. ಎನ್ ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ.ಆಗ ಮಾತ್ರಯಶಸ್ಸು ಲಭಿಸುತ್ತದೆ. ಸೋಲುಗಳನ್ನು ಕೈಚಾಚಿ ಸ್ವೀಕರಿಸಿದರೆ ಮಾತ್ರ ಗೆಲುವೆಂಬ ಪದದ ಅರ್ಥ ಹಾಗೂ ಆ ಪದದ ಬೆಲೆ ತಿಳಿದುಬರುತ್ತದೆ. ಸೋತವನಿಗೆ ಅವಕಾಶಗಳಿರುವುದಿಲ್ಲ. ಅವಕಾಶಗಳನ್ನು ನಾವು ಸೃಷ್ಟಿಸಬೇಕು ಎಂದರು. ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜೀವನದಾಸ್ , ಕಾಲೇಜಿನ ಅಧ್ಯಾಪಕರು ಉಪಸ್ಥಿತರಿದ್ದರು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ ಶಾಸ್ತ್ರೀ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು