ಬೆಂಗಳೂರು, ಜುಲೈ 20: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟಗೊಂಡಿದೆ. ಎಸ್ ಎಸ್ ಎಲ್ ಸಿ+ ಪ್ರಥಮ ಪಿಯುಸಿ+ ದ್ವಿತೀಯ ಪಿಯುಸಿ ಕೃಪಾಂಕ ಪರಿಗಣನೆ ಮಾಡಲಾಗಿದೆ. ಅದರಂತೆ, 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಅದರಲ್ಲಿ 3,35,138 ವಿದ್ಯಾರ್ಥಿಗಳು, ಹಾಗೂ 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. ಹಾಗೂ 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆಯಾಗಿದ್ದಾರೆ. ಹತ್ತನೇ ತರಗತಿಯಲ್ಲಿ ವಿಷಯವಾರು ಪಡೆದಿದ್ದ ಅಂಕಗಳ ಶೇ.45ರಷ್ಟು ಅಂಕ ಗಳಿಕೆ, ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ಗಳಿಸಿರುವ ಅಂಕದಲ್ಲಿ ಶೇ.45ರಷ್ಟು ಅಂಕವನ್ನು ಪರಿಗಣನೆಗೆ ತೆಗೆದುಕೊಳ್ಳಲಾಗಿದ್ದು, ದ್ವಿತೀಯ ಪಿಯುಸಿಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗೆ ಶೇ.10ರಷ್ಟು ಅಂಕ ಜತೆಗೆ ಪ್ರಥಮ ಪಿಯುಸಿಯಲ್ಲಿ ಪಡೆದ ಅಂಕಗಳಿಗೆ ಶೇ.5ರಷ್ಟು ಫಲಿತಾಂಶ ನೀಡುತ್ತೇವೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ. 600ಕ್ಕೆ 600 ಅಂಕ ಪಡೆದ ವಿದ್ಯಾರ್ಥಿಗಳು: ದಕ್ಷಿಣ ಕನ್ನಡ ಜಿಲ್ಲೆ 445, ಬೆಂಗಳೂರು ದಕ್ಷಿಣ 302, ಬೆಂಗಳೂರು ಉತ್ತರ 261, ಉಡುಪಿ 149, ಹಾಸನ 104 ವಿದ್ಯಾರ್ಥಿಗಳು. ಈ ವರ್ಷ ಪರೀಕ್ಷೆಗೆ 3, 35.138 ಬಾಲಕರು ಮತ್ತು 3.31.359 ಬಾಲಕಿಯರು ಸೇರಿದಂತೆ ಒಟ್ಟು 6, ಲಕ್ಷದ 66 ಸಾವಿರದ 497 ವಿದ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಡಿಸ್ಟಿಕ್ಷನ್ ಮತ್ತು ಮೊದಲ ದರ್ಜೆಯಲ್ಲಿ 1 ಲಕ್ಷದ 95 ಸಾವಿರದ 650 ವಿದ್ಯಾರ್ಥಿಗಳು ಪಾಸಾಗಿದ್ದರೆ, ಎರಡನೇ ದರ್ಜೆಯಲ್ಲಿ 1 ಲಕ್ಷದ 47 ಸಾವಿರದ 55 ಹಾಗೂ 68 ಸಾವಿರದ 721 ವಿದ್ಯಾರ್ಥಿಗಳು ಜಸ್ಟ್ ಪಾಸ್ ಆಗಿದ್ದಾರೆ.
You Might Also Like
ವಿದ್ಯಾರಣ್ಯ ಶಾಲೆಯ ಮಕ್ಕಳು ಜಿಲ್ಲಾ ಮಟ್ಟಕ್ಕೆ ಆಯ್ಕೆ-ಕಹಳೆ ನ್ಯೂಸ್
ಕುಂದಾಪುರ: ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಕುಂದಾಪುರ ಇವರ ಸಹಭಾಗಿತ್ವದಲ್ಲಿ ಎಕ್ಸೆಲೆಂಟ್ ಪದವಿ ಪೂರ್ವ ಕಾಲೇಜು...
ಎಂ ಎ ಸ್ನಾತಕೋತ್ತರ ಪದವಿ ; ಉಡುಪಿಯ ವಿಂಧ್ಯಾ ಆಚಾರ್ಯಳಿಗೆ ಪ್ರಥಮ ರ್ಯಾಂಕ್ ಸಹಿತ ಚಿನ್ನದ ಪದಕ – ಕಹಳೆ ನ್ಯೂಸ್
ಬೆಂಗಳೂರಿನ ಜೈನ್ ಡೀಮ್ಡ್ ವಿಶ್ವವಿದ್ಯಾಲಯದ ಘಟಿಕೋತ್ಸವವು ಬುಧವಾರ ನೆರವೇರಿತು ಈ ಸಂದರ್ಭದಲ್ಲಿ ವಿವಿಯಲ್ಲಿ ಎಂ ಎ . ಪರ್ಫಾಮಿಂಗ್ ಆರ್ಟ್ ( ನೃತ್ಯಶಾಸ್ತ್ರ) ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ...
ಕೇಪು ಸರಕಾರಿ ಹಿ ಪ್ರಾ ಶಾಲೆಯಲ್ಲಿ ವಿವೇಕ ಕೊಠಡಿ ಉದ್ಘಾಟನೆ ; ಎಂಆರ್ ಪಿ ಎಲ್ ನಿಂದ ಸಮಾಜಮುಖಿ ಕೆಲಸ ನಿರಂತರ; ಅಶೋಕ್ ಕುಮಾರ್ ರೈ-ಕಹಳೆ ನ್ಯೂಸ್
ಪುತ್ತೂರು: ಎಂ ಆರ್ ಪಿ ಎಲ್ ಸಂಸ್ಥೆಯಿಂದ ನಿರಂತರ ಸಮಾಜಮುಖಿ ಕೆಲಸ ನಡೆಯುತ್ತಿದೆ, ಎಲ್ಲಾ ಕ್ಷೇತ್ರಗಳಿಗೂ ಈ ಸಂಸ್ಥೆಯ ನೆರವು ವ್ಯಾಪಿಸಿರುವುದು ಅತ್ಯಂತ ಸಂತೋಷ ಹಾಗೂ ಅಭಿಮಾನದ...
ರಾಜ್ಯ ಮಟ್ಟದ ಸಹಕಾರ ರತ್ನ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾದ ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ ಮತ್ತು ಡಾ. ಎಸ್ ಆರ್ ಹರೀಶ್ ಆಚಾರ್ಯ – ಕಹಳೆ ನ್ಯೂಸ್
ಮಂಗಳೂರು : ಸಹಕಾರ ಕ್ಷೇತ್ರದ ಸಾಧನೆಗಾಗಿ ನೀಡಲಾಗುವ ಸಹಕಾರ ರತ್ನ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಉಪಾಧ್ಯಕ್ಷರಾದ, ಹಿರಿಯ ಸಹಕಾರಿ ವಿನಯಕುಮಾರ್ ಸೂರಿಂಜೆ...