Sunday, January 19, 2025
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಆಗಸ್ಟ್‌ 10ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ..! ; ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ – ಕಹಳೆ ನ್ಯೂಸ್

ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಆಗಸ್ಟ್‌ 10 ರ ವೇಳೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸೋಮವಾರ ನಡೆದ ಪರೀಕ್ಷೆಗೆ ಶೇ 99.6 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಎಲ್ಲೂ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಇದು ಶಿಕ್ಷಣ ಇಲಾಖೆಯ ಪರೀಕ್ಷೆ ಆಗಿರಲಿಲ್ಲ. ಸಾರ್ವಜನಿಕರ ಪರೀಕ್ಷೆ ಆಗಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿದ್ಯಾರ್ಥಿಯೊಬ್ಬರು ಗೊಂದಲಕ್ಕೆ ಒಳಗಾಗಿ ಬೇರೊಂದು ಪರೀಕ್ಷಾ ಕೇಂದ್ರಕ್ಕೆ ಹೋದಾಗ ಪೊಲೀಸ್‌ ಕಾನ್‌ಸ್ಟೆಬಲ್‌ ಒಬ್ಬರು ತಮ್ಮ ದ್ವಿಚಕ್ರ ವಾಹನದಲ್ಲಿ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರಕ್ಕೆ ತಲುಪಿಸಿದರು ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪರೀಕ್ಷೆಗೆ ಬಂದವರಲ್ಲಿ 58 ವಿದ್ಯಾರ್ಥಿಗಳಿಗೆ ಕೋವಿಡ್‌ ದೃಢವಾಗಿತ್ತು.

ಅವರಿಗೆ ಕೋವಿಡ್‌ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. ಕೋವಿಡ್‌ ಲಕ್ಷಣಗಳು ಇದ್ದ 111 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಸಚಿವರು ತಿಳಿಸಿದರು.