Recent Posts

Sunday, January 19, 2025
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಬಜರಂಗದಳದ ಕಾರ್ಯಕರ್ತರ ಮಾಹಿತಿಯಂತೆ ಮಂಗಳೂರಿ‌ನ ಕುದ್ರೋಳಿ ಕಸಾಯಿಖಾನೆಗೆ ಅಧಿಕಾರಿಗಳಿಂದ ದಾಳಿ – ಕಹಳೆ ನ್ಯೂಸ್

ಮಂಗಳೂರು: ಮಹಾನಗರ ಪಾಲಿಕೆಯ ಅಧೀನದಲ್ಲಿರುವ ಕುದ್ರೋಳಿ ಕಸಾಯಿಖಾನೆಯಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ವಧೆ ಮಾಡಿದ ಹಿನ್ನಲೆಯಲ್ಲಿ ಗುತ್ತಿಗೆದಾರರ ಗುತ್ತಿಗೆಯನ್ನು ರದ್ದುಪಡಿಸಿ ಕಸಾಯಿಖಾನೆಯು ಮುಚ್ಚಿದ್ದರೂ ಕೂಡ ಬೇರೊಂದು ಕಟ್ಟಡದಲ್ಲಿ ಅಕ್ರಮವಾಗಿ ದನ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಬಜರಂಗದಳದ ಕಾರ್ಯಕರ್ತರು ನೀಡಿದ ಖಚಿತ ಮಾಹಿತಿಯ ಮೇರೆಗೆ ಇಂದು ಬೆಳಗ್ಗೆ ಮಂಗಳೂರು ಮಹಾನಗರ ಪಾಲಿಕೆ , ಎನಿಮಲ್ ವೆಲ್ಫೇರ್ ಬೋರ್ಡ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ಜಾನುವಾರುಗಳನ್ನು ವಶಪಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ 2020 ಜಾರಿಯಲ್ಲಿದ್ದರೂ ಕೂಡ ದ.ಕ ಜಿಲ್ಲೆಯಲ್ಲಿ ಜಾನುವಾರುಗಳ ಹತ್ಯೆ ಎಗ್ಗಿಲ್ಲದೆ ನಡೆಯುತ್ತಿರುವುದಕ್ಕೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ವೈಫಲ್ಯವೇ ನೇರ ಕಾರಣ.. ಈ ಬಗ್ಗೆ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಬಜರಂಗದಳ ಆಕ್ರೋಶ ವ್ಯಕ್ತಪಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು