Recent Posts

Monday, January 20, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಜುಲೈ 25ರ ಬಳಿಕ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುತ್ತೇನೆ ” – ಬಿ ಎಸ್ ಯಡಿಯೂರಪ್ಪ ರಾಜೀನಾಮೆ ಪಕ್ಕ – ಕಹಳೆ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ತಮ್ಮ ರಾಜೀನಾಮೆಯ ಸುಳಿವು ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜುಲೈ 25ರ ನಂತರ ಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇನೆ. ನನ್ನ ಪರ ಪ್ರತಿಭಟನೆ ನಡೆಸುವುದು ಸರಿಯಲ್ಲ. ಹೈಕಮಾಂಡ್ ಏನು ಹೇಳುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ ಎಂದು ಹೇಳುವ ಮೂಲಕ ರಾಜೀನಾಮೆ ನೀಡುವುದರ ಕುರಿತು ಸುಳಿವು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಹೈಕಮಾಂಡ್ ಏನು ಹೇಳುತ್ತದೆಯೋ ಅದೇ ಅಂತಿಮ. ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ. ಜುಲೈ 25ರ ನಂತರ ಹೈಕಮಾಂಡ್ ಸಂದೇಶಕ್ಕೆ ಕಾಯುತ್ತಿದ್ದೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಲಸ ಮೆಚ್ಚಿ ವರಿಷ್ಠರು 75 ವರ್ಷ ಆದ ಬಳಿಕ 78 ರವರೆಗೂ ಅಧಿಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದೆ ಪಕ್ಷ ಮತ್ತೆ ಅಧಿಕಾರಕ್ಕೆ ತರೋದು ನನ್ನ ಸಂಕಲ್ಪ. 26 ಕ್ಕೆ ಸರ್ಕಾರದ ಸಾಧನೆ ಬಗ್ಗೆ ವಿಶೇಷ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಕಾರ್ಯಕ್ರಮ ಬಳಿಕ ವರಿಷ್ಠರ ಸೂಚನೆಯಂತೆ ನಡ್ಕೋತೇನೆ. ವರಿಷ್ಠರ ತೀರ್ಮಾನವೇ ನನ್ನ ತೀರ್ಮಾನ ಎಂದು ಬಿಎಸ್‍ವೈ ತಿಳಿಸಿದರು.