Monday, January 20, 2025
ಸುದ್ದಿ

ಪೆರ್ನೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಂಶ ವಿತರಣೆ- ಕಹಳೆ ನ್ಯೂಸ್

ಪೆರ್ನೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟಗಳ ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರಿಗೆ ಲಾಭಂಶ ವಿತರಣೆ ಕಾರ್ಯಕ್ರಮವು ಶ್ರೀ ದೇವಿ ಭಜನಾ ಮಂದಿರ ಗಾಂಧಿನಗರ ಕೆದಿಲದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷರಾದ ತನಿಯಪ್ಪ ಗೌಡ ಹಾಗೂ ಜನಜಾಗೃತಿ ವೇದಿಕೆ ಸದಸ್ಯರಾದ ಪುಷ್ಪರಾಜ ಹೆಗ್ಡೆ ಉದ್ಘಾಟಿಸಿದರು. ಹಾಗೂ ಯೋಜನಾಧಿಕಾರಿ ಚೆನ್ನಪ್ಪ ಗೌಡ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮವನ್ನು ಪೆರ್ನೆ ವಲಯದ ಮೇಲ್ವಿಚಾರಕಿ ಜಯಶ್ರೀ ನಿರೂಪಿಸಿ, ಸೇವಾ ಪ್ರತಿನಿಧಿ ಶಾರದಾ ಸ್ವಾಗತಿಸಿ, ಜಯಂತಿಯವರು ವಂದಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಹಾಗೂ ಒಕ್ಕೂಟದ ಅಧ್ಯಕ್ಷರಾದ ಚೆನ್ನಪ್ಪ ಕುಲಾಲ್ ಮತ್ತು ಲೆಕ್ಕ ಪರಿಶೋಧಕರಾದ ಯಶೋಧ , ನಗದು ಸಹಾಯಕರು, ಸೇವಾ ಪ್ರತಿನಿಧಿ ಶಾರದಾ, ಜಯಂತಿ ಹಾಗೂ ರಮ್ಲತ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು