Monday, January 20, 2025
ಪುತ್ತೂರು

ಪುತ್ತೂರಿನಲ್ಲಿ ಬೀದಿ-ಬದಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಅಂಗಡಿಗಳ ತೆರವು ಕಾರ್ಯಚರಣೆ- ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿಯಲ್ಲಿ ಅಕ್ರಮವಾಗಿ ನಿರ್ಮಾಣವಾದ ಅಂಗಡಿಗಳ ತೆರವು ಕಾರ್ಯಾಚರಣೆ ಇಂದು ಬೆಳಗ್ಗೆ ನಗರಸಭೆ ಅಧಿಕಾರಿಗಳ ನೇತೃತ್ವದಲ್ಲಿ ನಡೆಯಿತು. ಯಾವುದೇ ಅನುಮತಿಯಿಲ್ಲದೆ ವ್ಯಾಪಾರ ಚಟುವಟಿಯನ್ನು ನಡೆಸುತ್ತಿದ್ದವರಿಗೆ ಅಧಿಕಾರಿಗಳು ಈ ರೀತಿ ಬಿಸಿ ಮುಟ್ಟಿಸಿದ್ದಾರೆ. ನಗರಸಭೆ ಪೌರಾಯುಕ್ತ ಮಧು ಎಸ್ ಮನೋಹರ್ ಅವರ ನೇತೃತ್ವದಲ್ಲಿ ಹಾಗೂ ಅಧಿಕಾರಿಗಳ ಉಪಸ್ಥಿತಿಯಲ್ಲಿ ಪೊಲೀಸ್ ಬಂದೋಬಸ್ತ್ ನೊಂದಿಗೆ ನಗರಸಭೆ ವ್ಯಾಪ್ತಿಯ ಹಲವೆಡೆ ಅಕ್ರಮವಾಗಿ ನಿರ್ಮಾಣಗೊಂಡ ಸಣ್ಣ-ಪುಟ್ಟ ಅಂಗಡಿಗಳನ್ನು ತೆರವು ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು