Tuesday, January 21, 2025
ಪುತ್ತೂರು

ಅಂಬಿಕಾದಲ್ಲಿ ಶೈಕ್ಷಣಿಕ ಕಾರ್ಯಾಗಾರ ಹಾಗೂ ಪದಗ್ರಹಣ ಸಮಾರಂಭ : ಶಿಕ್ಷಕರು ಕೌಶಲಗಳನ್ನು ಹೆಚ್ಚಿಸಿಕೊಳ್ಳಬೇಕು : ಸುಬ್ರಹ್ಮಣ್ಯ ನಟ್ಟೋಜ- ಕಹಳೆ ನ್ಯೂಸ್

ಪುತ್ತೂರು : ನಗರದ ನಟ್ಟೋಜ ಪೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದಲ್ಲಿ ಶಿಕ್ಷಕರಿಗಾಗಿ ಒಂದು ದಿನದ ಶೈಕ್ಷಣಿಕ ಕಾರ್ಯಾಗಾರ ಹಾಗೂ ಅಂಬಿಕಾ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿಯಾಗಿ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಆಯ್ಕೆಯಾಗಿದ್ದ ಗಣೇಶ್ ಪ್ರಸಾದ್ ಎ ಹಾಗೂ ರಾಕೇಶ್ ಕುಮಾರ್ ಕಮ್ಮಜೆಯವರ ಪದಗ್ರಹಣ ಸಮಾರಂಭವು ನಡೆಯಿತು. ಕಾರ್ಯಕ್ರಮವನ್ನು ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಅನೇಕ ಸವಾಲುಗಳಿಗೆ ಶಿಕ್ಷಕರು ಸನ್ನದ್ಧರಾಗಬೇಕಿದೆ. ಕಾಲಕಾಲಕ್ಕೆ ನಮ್ಮ ಶಕ್ತಿಯನ್ನು ಹೆಚ್ಚಿಸುವುದಕ್ಕೆ ಕಾರ್ಯಾಗಾರಗಳ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಜಾರಿಯಾಗಲಿರುವ ನೂತನ ಶಿಕ್ಷಣ ನೀತಿಗೆ ಶಿಕ್ಷಕರು ತಕ್ಷಣ ಸಿದ್ಧರಾಗಬೇಕು. ನಮ್ಮ ಕೌಶಲಗಳನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿಗಳ ಹಾಗೂ ಸಂಸ್ಥೆಯ ಬೆಳವಣಿಗೆಗೆ ಯೋಗದಾನ ನೀಡಬೇಕಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಂಬಿಕಾ ಪದವಿ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಗಣೇಶ್ ಪ್ರಸಾದ್ ಹಾಗೂ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ರಾಕೇಶ್ ಕುಮಾರ್ ಕಮ್ಮಜೆಯವರು ಆಡಳಿತಾಧಿಕಾರಿ ಹಾಗೂ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಜವಾಬ್ಧಾರಿ ಸ್ವೀಕರಿಸಿದರು. ವೇದಿಕೆಯಲ್ಲಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ, ಕಾಸರಗೋಡಿನ ಚಿನ್ಮಯ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಡಾ.ಪುಷ್ಪರಾಜ ಉಪಸ್ಥಿತರಿದ್ದರು. ಅಂಬಿಕಾ ಸಿಬಿಎಸ್‍ಇ ವಿದ್ಯಾಲಯದ ಶಿಕ್ಷಕಿ ಸುಜಯಾ ಪ್ರಾರ್ಥಿಸಿ, ಪ್ರಾಂಶುಪಾಲೆ ಮಾಲತಿ ಡಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ಸತೀಶ್ ವಂದಿಸಿ, ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು