ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಜುಲೈ 26ಕ್ಕೆ ಕಾರ್ಗಿಲ್ ವಿಜಯ ದಿವಸ್ ಆಚರಣೆ-ಕಹಳೆ ನ್ಯೂಸ್
ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಗರದ ಕಿಲ್ಲೆ ಮೈದಾನದ ಬಳಿ ನಿರ್ಮಿಸಲಾಗಿರುವ ದೇಶದ ಏಕೈಕ ಖಾಸಗಿ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಜುಲೈ 26ರಂದು ಬೆಳಗ್ಗೆ 10 ಗಂಟೆಗೆ ಕಾರ್ಗಿಲ್ ವಿಜಯ ದಿವಸದ ಆಚರಣೆ ನಡೆಯಲಿದೆ. ಪುತ್ತೂರಿನ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಗನ್ನಾಥ ಎಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ನಟ್ಟೋಜ ಫೌಂಡೇಶನ್ ಟ್ರಸ್ಟ್‍ನ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಪುತ್ತೂರಿನ ಶಾಸಕ ಸಂಜೀವ ಮಠಂದೂರು, ನಗರ ಸಭೆ ಅಧ್ಯಕ್ಷ ಜೀವಂಧರ್ ಜೈನ್, ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರುಡಾಲ್ಫ್ ಪಿರೇರಾ, ಹಿರಿಯ ವ್ಯವಹಾರಿಕ ನ್ಯಾಯಾಧೀಶ ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ರಮೇಶ್, ಸಹಾಯಕ ಆಯುಕ್ತ ಡಾ.ಯತೀಶ್ ಉಲ್ಲಾಳ್, ಪೌರಾಯುಕ್ತ ಮಧು ಎಸ್ ಮನೋಹರ್ ಹಾಗೂ ತಹಶೀಲ್ದಾರ್ ರಮೇಶ್ ಬಾಬು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಪುತ್ತೂರಿನ ಮಾಜಿ ಸೈನಿಕರ ಸಂಘ ಹಾಗೂ ತಾಲೂಕು ಕಾನೂನು ಸೇವೆಗಳ ಸಮಿತಿಯ ಸಂಯುಕ್ತಾಶ್ರಯದಲ್ಲಿ ಜರುಗಲಿದ್ದು, ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರ ಯೋಧರಿಗೆ ಗೌರವ ಸಲ್ಲಿಸಲು ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ಕಾರ್ಯಕ್ರಮವು ಕೋವಿಡ್ ನಿಯಮಾವಳಿಗನುಗುಣವಾಗಿ ನಡೆಯಲಿದೆ.