Recent Posts

Sunday, January 19, 2025
ಬೆಳ್ತಂಗಡಿ

ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ: ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ (ರಿ) ಊಂತನಾಜೆ, ಮೊಗ್ರು ಹಾಗೂ ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯದ ಸಹಭಾಗಿತ್ವದಲ್ಲಿ ವನಮಹೋತ್ಸವ ಕಾರ್ಯಕ್ರಮ ನಿನ್ನೆ ಊಂತನಾಜೆ ಭಜನಾ ಮಂದಿರದಲ್ಲಿ ನಡೆಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

      

ಜಾಹೀರಾತು
ಜಾಹೀರಾತು
ಜಾಹೀರಾತು

ಊಂತನಾಜೆ ಭಜನಾ ಮಂದಿರ ಪರಿಸರದಲ್ಲಿ ಗಿಡ ನೆಡುವ ಮೂಲಕ ಹಾಗೂ ಭಜನಾ ಮಂದಿರದ ಸದಸ್ಯರಿಗೆ ಗಿಡಗಳನ್ನು ವಿತರಿಸುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಅರಣ್ಯ ಇಲಾಖೆಯ ರಕ್ಷಕರಾದ ಕೆ.ಎನ್.ಜಗದೀಶ ಅವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಲಕ್ಷ್ಮೀ ನಾರಾಯಣ ಭಜನಾ ಮಂದಿರ(ರಿ) ಊಂತನಾಜೆ ಇದರ ಅಧ್ಯಕ್ಷರಾದ ಶ್ರೀಧರ ಗೌಡ ವಹಿಸಿದ್ದರು. ಈ ಸಂದರ್ಭಲ್ಲಿ ಧರ್ಣಪ್ಪ ಗೌಡ ಅತ್ಯರಖಂಡ, ಕುಶಾಲಪ್ಪ ಗೌಡ ಊಂತನಾಜೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.