Sunday, January 19, 2025
ಪುತ್ತೂರು

ವಿಶ್ವ ಹಿಂದು ಪರಿಷತ್ ಮಾತೃಶಕ್ತಿ ವತಿಯಿಂದ ಗುರುಪೂರ್ಣಿಮೆ ಆಚರಣೆ-ಕಹಳೆ ನ್ಯೂಸ್

ವಿಶ್ವ ಹಿಂದು ಪರಿಷತ್ ಮಾತೃಶಕ್ತಿ ದುರ್ಗಾವಾಹಿನಿ ಪುತ್ತೂರು ಇದರ ವತಿಯಿಂದ ಗುರುಪೂರ್ಣಿಮೆ ಆಚರಣೆ ವಿಶ್ವ ಹಿಂದು ಪರಿಷತ್ ಪುತ್ತೂರು ಜಿಲ್ಲಾ ಕಾರ್ಯಾಲಯದಲ್ಲಿ ನಡೆಯಿತು‌.

ಜಾಹೀರಾತು
ಜಾಹೀರಾತು
ಜಾಹೀರಾತು


ವೆ.ಮೂ. ಶ್ರೀಕೃಷ್ಣ ಉಪಾಧ್ಯಾಯ ಅವರು ಗುರುಪೂರ್ಣಿಮೆಯ ಮಹತ್ವವನ್ನು ತಿಳಿಸಿಕೊಟ್ಟರು. ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ. ಕೃಷ್ಣಪ್ರಸನ್ನ, ಕಾರ್ಯದರ್ಶಿ ಸತೀಶ್ ಬಿ ಎಸ್, ಪ್ರಖಂಡ ಕಾರ್ಯದರ್ಶಿ ವಿಶಾಖ್ ಸಸಿಹಿತ್ಲು, ನಗರ ಸಭಾ ಸದಸ್ಯೆ ಗೌರಿ ಬನ್ನೂರು, ಜಯಂತಿ ನಾಯಕ್, ಜಯಶ್ರೀ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಶ್ರೀಕೃಷ್ಣ ಉಪಾಧ್ಯಾಯ ಅವರಿಗೆ ಗುರುಕಾಣಿಕೆ ಸಲ್ಲಿಕೆ ಹಾಗು ಭಾರತ ಮಾತಾ ಪೂಜನ ನಡೆಯಿತು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷೆ ಪ್ರೇಮಲತಾ ರಾವ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು, ಮಾತೃಶಕ್ತಿ ಪ್ರಮುಖೆ ಮೋಹಿನಿ ದಿವಾಕರ್ ಧನ್ಯವಾದ ಸಮರ್ಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು