Recent Posts

Monday, January 20, 2025
ಸುದ್ದಿ

ಯೆನೆಪೊಯ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿ – ಕಹಳೆ ನ್ಯೂಸ್

ಮಂಗಳೂರು: ಯೆನೆಪೊಯ ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿರುವ ಕೇಂದ್ರ ಸರ್ಕಾರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಮೆದುಳಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ತಡರಾತ್ರಿ 12ರಿಂದ ಆರಂಭವಾದ ಶಸ್ತ್ರ ಚಿಕಿತ್ಸೆಯು ನಸುಕಿನ ಜಾವ 5. 30ರವರೆಗೂ ನಡೆಯಿತು.  ಆಸ್ಕರ್ ರವರ ಮೆದುಳಲ್ಲಿ  ಹೆಪ್ಪುಗಟ್ಟಿದ ರಕ್ತವನ್ನು ಶಸ್ತ್ರ ಚಿಕಿತ್ಸೆ ಮೂಲಕ ತೆಗೆದು ಹಾಕಲಾಯಿತು. ಯೆನೆಪೊಯ ಆಸ್ಪತ್ರೆಯ ಡಾ. ದಿವಾಕರ್ ರಾವ್, ಎ. ಜೆ. ಆಸ್ಪತ್ರೆಯ ಡಾ. ಸುನೀಲ್ ಶೆಟ್ಟಿ ನೇತೃತ್ವದ ವೈದ್ಯರ ತಂಡ ಶಸ್ತ್ರ ಚಿಕಿತ್ಸೆ ನೆರವೇರಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು