Monday, January 20, 2025
ಸುದ್ದಿ

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ-ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ 30ನೇ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಸವರಾಜ ಬೊಮ್ಮಾಯಿ ಅವರಿಗೆ ಪ್ರಮಾಣ ವಚನ ಬೋಧಿಸಿದರು.


ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡುವಾಗ ಹಸಿರು ಶಾಲು ಧರಿಸಿ ರೈತ ನಾಯಕನಂತೆ ಪ್ರತಿಜ್ಞಾವಿಧಿ ಸ್ವೀಕರಿಸಿದ್ದರು. ಆದರೆ ಅವರ ನಂತರ ಇಂದು ಪ್ರಮಾಣ ವಚನ ಸ್ವೀಕಾರ ಮಾಡಿದ ಬೊಮ್ಮಾಯಿ ಆರ್.ಎಸ್.ಎಸ್ ಮತ್ತು ಹಿಂದುತ್ವದ ಪ್ರತಿಬಿಂಬಕವಾಗಿರುವ ಕೇಸರಿ ಶಾಲು ಧರಿಸಿ ಪ್ರಮಾಣ ವಚನ ಸ್ವೀಕರಿಸಿ ಗಮನ ಸೆಳೆದರು. ಇನ್ನು ಪದಗ್ರಹಣ ಕಾರ್ಯಕ್ರಮಕ್ಕೆ ಕೇಂದ್ರದ ನಾಯಕರು, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ರಾಜ್ಯ ನಾಯಕರು ಹಾಗೂ ಕುಟುಂಬಸ್ಥರು ಸಾಕ್ಷಿಯಾಗಿದ್ದಾರೆ ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ಜೋಡಿ ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದು, ಅದೇ ರೀತಿ ಎಸ್.ಆರ್ ಬೊಮ್ಮಾಯಿ ಹಾಗೂ ಮಗ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗುವ ಮೂಲಕ ಇತಿಹಾಸ ಮತ್ತೊಮ್ಮೆ ಮರುಕಳಿಸುವಂತೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು