Tuesday, January 21, 2025
ಸುದ್ದಿ

BREAKING : ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಹೊಸ ಯೋಜನೆ ಘೋಷಿಸಿದ ಸಿಎಂ ಬೊಮ್ಮಾಯಿ- ಕಹಳೆ ನ್ಯೂಸ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿರುವ ಬಸವರಾಜ ಬೊಮ್ಮಾಯಿ ಮೊದಲ ದಿನವೇ ಅನೇಕ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿಎಂ, ರೈತರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಈ ಹಿನ್ನೆಲೆಯಲ್ಲಿ ರೈತ ಮಕ್ಕಳ ಉನ್ನತ ಶಿಕ್ಷಣಕ್ಕಾಗಿ ಹೊಸ ಶಿಷ್ಯ ವೇತನ ಘೋಷಣೆ ಮಾಡಲಾಗಿದೆ. ಇದೇ ವೇಳೆ ಸಂಧ್ಯಾ ಸುರಕ್ಷಾ ಯೋಜನೆಯ ಹಣವನ್ನು ರೂ.1,000 ರಿಂದ 1,200 ರೂ.ಗೆ ಹೆಚ್ಚಳ, ವಿಧವಾ ವೇತನ 600 ರೂ. ಇದ್ದು, ಇದೀಗ 800 ರೂ.ಗೆ ಏರಿಕೆ ಮಾಡಲಾಗಿದೆ. ಅಂಗವಿಕಲ ವೇತನ 600 ರೂ.ರಿಂದ 800 ರೂ.ಗೆ ಏರಿಕೆ ಆಗಲಿದೆ. ನನ್ನ ಆಡಳಿತದಲ್ಲಿ ರೈತರು ಹಾಗೂ ಬಡವರ ಮಕ್ಕಳ ಏಳಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು