
ಮೂಡಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವನಮಹೋತ್ಸವವನ್ನು ಆಚರಿಸಲಾಯಿತು. ಮೂಡಬಿದಿರೆಯ ಪುರಸಭಾ ಅಧ್ಯಕ್ಷರಾದ ಪ್ರಸಾದ್ ಭಂಡಾರಿಯವರು ಮುಖ್ಯ ಅತಿಥಿಗಳಾಗಿ ಆಗಮಿಸಿ, “ಅಭಿವೃದ್ಧಿಗಾಗಿ ಕಾಂಕ್ರೀಟಿನ ನಾಡನ್ನು ಬೆಳೆಸುತ್ತಿರುವ ಸಂದರ್ಭದಲ್ಲಿ ಮನುಷ್ಯನ ಉಸಿರಿನ ರಕ್ಷಣೆಗಾಗಿ ಹಸಿರನ್ನ ಬೆಳೆಸಬೇಕಾದ ಅನಿವಾರ್ಯತೆ ಹಿಂದಿಗಿಂತಲೂ ಹೆಚ್ಚಿದೆ. ಆ ನಿಟ್ಟಿನಲ್ಲಿ ಎಕ್ಸಲೆಂಟ್ ವಿದ್ಯಾಸಂಸ್ಥೆ ಅಭಿವೃದ್ಧಿಯ ಪಥದಲ್ಲಿ ಸಾಗುತ್ತ ಶಿಕ್ಷಣದ ಜೊತೆಗೆ ಪರಿಸರವನ್ನು ಉಳಿಸಿ ಬೆಳಿಸುವ ಕೈಂಕರ್ಯದಲ್ಲಿ ತೊಡಗಿ ಪರಿಸರವನ್ನು ಹಸಿರಾಗಿಸಿದೆ” ಎಂದು ಮಾತನಾಡಿ ಸಾಂಕೇತಿಕವಾಗಿ ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವರ್ಷ ಎಕ್ಸಲೆಂಟ್ ಸಂಸ್ಥೆಯ ಆವರಣದಲ್ಲಿ ವಿವಿಧ ತಳಿಯ 500ಕ್ಕಿಂತಲೂ ಹೆಚ್ಚಿನ ಗಿಡಗಳನ್ನು ನೆಟ್ಟು ಪರಿಸರ ಕಾಳಜಿಯನ್ನು ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್ ಅಧ್ಯಕ್ಷತೆ ವಹಿಸಿದ್ದರು, ಹಾಗೂ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್, ಆಡಳಿತಾಧಿಕಾರಿ ಹರೀಶ್ ಶೆಟ್ಟಿ ಮತ್ತು ಬೋಧಕ, ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಸಂಸ್ಕøತ ಉಪನ್ಯಾಸಕರಾದ ತೇಜಸ್ವಿ ಭಟ್ ಕಾರ್ಯಕ್ರಮ ನಿರೂಪಿಸಿದರು.