Recent Posts

Monday, January 20, 2025
ಬಂಟ್ವಾಳ

“ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಕೇಂದ್ರಿತ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ”- ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು – ಕಹಳೆ ನ್ಯೂಸ್

ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ನಡೆದ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ವಿಶೇಷ ಕಾರ್ಯಕಾರಿಣಿಯಲ್ಲಿ ಭಾಗವಹಿಸಿ ಮಾತನಾಡಿದ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಗುತ್ತು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಹಿಳಾ ಕೇಂದ್ರಿತ ಯೋಜನೆಗಳ ಮೂಲಕ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುತ್ತಿದೆ. ಮಹಿಳಾ ಮೋರ್ಚಾದ ವತಿಯಿಂದ ಈ ಸಂದೇಶವನ್ನು ಪ್ರತೀ ಮನೆಮನೆಗೂ ತಲುಪಿಸುವ ಕಾರ್ಯವಾಗಬೇಕಿದೆ ಎಂದರು.


ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ದೇವಪ್ಪ ಪೂಜಾರಿ ಮಾತನಾಡಿ,ಮಹಿಳಾ ಮೋರ್ಚಾ ನಡೆಸುವ ಪಕ್ಷ ಸಂಘಟನೆಯ ಕಾರ್ಯಕ್ಕೆ ಕ್ಷೇತ್ರ ಬಿಜೆಪಿಸಮಿತಿಯ ವತಿಯಿಂದ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದರು. ಬಂಟ್ವಾಳ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾರತೀ ಚೌಟ ಅಧ್ಯಕ್ಷತೆ ವಹಿಸಿದ್ದರು.
ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಧನಲಕ್ಷ್ಮೀ ಶೆಟ್ಟಿ, ಕಾರ್ಯದರ್ಶಿ ಪೂಜಾ ಪೈ, ಬಂಟ್ವಾಳ ಪ್ರಭಾರಿ ಆಶಾ ಡಿ’ಸಿಲ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಭೆಯಲ್ಲಿ ಕಮಲಾಪ್ರಭಾಕರ ಭಟ್ ರವರನ್ನು ಸನ್ಮಾನಿಸಲಾಯಿತು. ಲಖಿತ ಆರ್ ಶೆಟ್ಟಿ ಸ್ವಾಗತಿಸಿದರು.ಸೀಮಾ ಮಾಧವ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು