Monday, November 18, 2024
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸಾರ್ವಜನಿಕ ಸಭೆ ಸಮಾರಂಭ, ಉತ್ಸವಗಳಿಗೆ ನಿರ್ಬಂಧ | ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ; ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ‌. ಕಟ್ಟುನಿಟ್ಟಿನ ಆದೇಶ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತವು ಸರ್ಕಾರದ
ನಿರ್ದೇಶನದಂತ ಕಾಲಕಾಲಕ್ಕೆ ಎಲ್ಲಾ ಅವಶ್ಯಕ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಕಟ್ಟುನಿಟ್ಟಿನ ನಿರ್ಬಂಧಗಳ ನಂತರವು
ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಏರಿಕೆ ಆಗಿರುವ ಹಿನ್ನಲೆಯಲ್ಲಿ ಸರ್ಕಾರವು ಉಲ್ಲೇಖದಂತ ಕಣ್ಣಾವಲು, ನಿಯಂತ್ರಣ ಮತ್ತು ಜಾಗೃತಿಗೆ ಸಂಬಂಧಿಸಿದಂತೆ ಕೇರಳ ಮತ್ತು ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣೆಯನ್ನು ನಿರ್ದೇಶಿಸಿರುತ್ತದೆ.

ಈ ಮಧ್ಯೆ ದಕ್ಷಿಣ ಕನ್ನಡ ಜಿಲ್ಲೆಯ ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿರುವುದನ್ನು ಗಮನದಲ್ಲಿಟ್ಟುಕೊಂಡು ನೆರೆಯ ರಾಜ್ಯ | ಜಿಲ್ಲೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಯಾಣಿಕರ ಓಡಾಟದಿಂದಾಗಿ ವ್ಯಕ್ತಿಯಿಂದ ವ್ಯಕ್ತಿಗೆ ಸೋಂಕು ಹರಡುವ ಸಾಧ್ಯತೆಗಳಿರುವುದರಿಂದ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸಾರ್ವಜನಿಕರು ಮುಕ್ತವಾಗಿ ಓಡಾಡುವುದನ್ನು ಹಾಗೂ ಬೆರೆಯುವುದನ್ನು ತಡೆಯುವುದು ಅನಿವಾರ್ಯವಾಗಿರುತ್ತದೆ. ಅಲ್ಲದೇ, ಸಂಭಾವ್ಯ ಅಪಾಯವನ್ನು ತಪ್ಪಿಸಲು ಕೂಡಲೇ ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕೆಂದು ತಜ್ಞರು ಸರಕಾರಕ್ಕೆ ಸಲಹೆಯನ್ನು ನೀಡಿರುತ್ತಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೂಡಾ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಈ ಹಂತದಲ್ಲಿಯೇ ಕಟ್ಟುನಿಟ್ಟಿನ ನಿರ್ಬಂಧಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ 3 ನೇ ಅಲೆಯನ್ನು ಸಮರ್ಪಕವಾಗಿ ನಿರ್ವಹಿಸುವುದು ಕೂಡಾ
ಅನಿವಾರ್ಯವಾಗಿರುತ್ತದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಆದ್ದರಿಂದ, ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ಹಾಗೂ ನೆರೆಯ ಕೇರಳ ರಾಜ್ಯದ
ಕಾಸರಗೋಡು ಜಿಲ್ಲೆಯಲ್ಲಿನ ಕೋವಿಡ್ 19 ಪರಿಸ್ಥಿತಿಯನ್ನು ಅವಲೋಕಿಸಿ ಸಾರ್ವಜನಿಕ ಹಿತದೃಷ್ಟಿಯಿಂದ ಡಾ|| ರಾಜೇಂದ್ರ ಕೆ.ವಿ., ಭಾಆಸೇ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹಾಗೂ ಅಧ್ಯಕ್ಷರು, ಜಿಲ್ಲಾ ವಿಪತ್ತು ನಿರ್ವಹಣಾ
ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 (3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಕೆಳಗಿನಂತೆ ನಿರ್ಬಂಧಗಳನ್ನು ಹೊರಡಿಸಿರುತ್ತಾರೆ.

1. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆ ಮತ್ತು ಮಂಗಳೂರು ನಡುವಿನ ಕೆ.ಎಸ್.ಆರ್.ಟಿ.ಸಿ. ಮತ್ತು ಎಲ್ಲಾ
ಖಾಸಗಿ ಬಸ್ ಗಳ ಸಂಚಾರವನ್ನು ಸಂಪೂರ್ಣವಾಗಿ ದಿನಾಂಕ: 01-08-2021 ರಿಂದ 07-08-2021 ರವರೆಗೆ
ನಿರ್ಬಂಧಿಸಲಾಗಿದೆ.

2. ನೆರೆಯ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ದಿನಂಪ್ರತಿ ಪ್ರಯಾಣಿಸುವವರು,
ಕಾಲೇಜು ವಿದ್ಯಾರ್ಥಿಗಳು ಕೋವಿಡ್ ಲಸಿಕೆ ಪಡೆದಿದ್ದರೂ (2 ಡೋಸ್ ಆಗಿದ್ದರೂ) 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯ ಆಧಾರದಲ್ಲಿ 7 ದಿನಗಳ ಅವಧಿಗೆ
ಅನುಮತಿಸಲಾಗುವುದು.

3. ಕೇರಳದಿಂದ / ಮಹಾರಾಷ್ಟ್ರದಿಂದ, ಇತರ ಹೊರ ರಾಜ್ಯದಿಂದ ನರ್ಸಿಂಗ್ / ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು RT-
PCR ಪರೀಕ್ಷೆಯ ನೆಗೆಟಿವ್ ವರದಿಯೊಂದಿಗೆ ಮಂಗಳೂರಿಗೆ ಬಂದ ಬಳಿಕ ಒಂದು ವಾರದ ಕಡ್ಡಾಯ ಕ್ವಾರಂಟೈನ್ ಗೆ
ಒಳಪಡತಕ್ಕದ್ದು. ಏಳು ದಿನದ ಬಳಿಕ ಮತ್ತೊಮ್ಮೆ ಕೋವಿಡ್ ತಪಾಸಣೆಗೆ ಒಳಪಡತಕ್ಕದ್ದು.

4. RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ತರದೇ ರೈಲು ಮೂಲಕ ಗಡಿ ಪ್ರವೇಶಿಸಿದ ವ್ಯಕ್ತಿಗಳು ರೈಲ್ವೇ ಸ್ಟೇಷನ್ ಗಳಲ್ಲಿ ಕೋವಿಡ್ ತಪಾಸಣೆಗೆ ಒಳಪಡತಕ್ಕದ್ದು. ತಪಾಸಣೆಯ ವೇಳ ಪಾಸಿಟಿವ್ ಬಂದಲ್ಲಿ / ವರದಿ ಬರುವವರೆಗೆ ಕೋವಿಡ್ ಕೇರ್ ಸೆಂಟರ್ ನಲ್ಲಿ ಕ್ವಾರಂಟೈನ್ ಆಗುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸಂಬಂಧಪಟ್ಟ ತಹಶೀಲ್ದಾರರು ಕೋವಿಡ್ ಕೇರ್ ಸೆಂಟರ್ ತರೆಯಲು ಕ್ರಮ ವಹಿಸುವುದು.

5. ಚೆಕ್ ಪೋಸ್ಟ್ ಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿ 24*7 ತಪಾಸಣೆ ನಡೆಯುವ ಬಗ್ಗೆ ಸಂಬಂಧಪಟ್ಟ ಉಪ
ವಿಭಾಗಧಿಕಾರಿ ಹಾಗೂ ಉಪ ಪೊಲೀಸ್ ಅಧೀಕ್ಷಕರು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಖಾತ್ರಿಪಡಿಸಿಕೊಳ್ಳತಕ್ಕದ್ದು.

6, ವೈದ್ಯಕೀಯ ತುರ್ತು ಸೇವೆ, ಆಂಬ್ಯುಲೆನ್ಸ್ ಹಾಗೂ ಅಂತರ್ ರಾಜ್ಯ ಸರಕು ಸಾಮಾಗ್ರಿಗಳ ಸಾಗಾಟಕ್ಕೆ ಮೇಲ್ಕಂಡ
ನಿರ್ಬಂಧವು ಅನ್ವಯಿಸುವುದಿಲ್ಲ.

7. ಜಿಲ್ಲೆಯಾದ್ಯಂತ ಎಲ್ಲಾ ಸಾಮಾಜಿಕ / ರಾಜಕೀಯ | ಸಾಂಸ್ಕೃತಿಕ / ಧಾರ್ಮಿಕ ಕಾರ್ಯಕ್ರಮಗಳು | ಸಮಾರಂಭಗಳು ಹಾಗೂ ಉತ್ಸವಗಳನ್ನು ನಿರ್ಬಂಧಿಸಲಾಗಿದೆ.

8. ಮದುವೆಯನ್ನು ಗರಿಷ್ಠ 50 ಜನರ ಪರಿಮಿತಿಗೊಳಪಟ್ಟು ಸ್ಥಳೀಯ ಆಡಳಿತದ ಪ್ರಾಧಿಕಾರಗಳಿಂದ ಪೂರ್ವಾನುಮತಿಯೊಂದಿಗೆ ಆಯೋಜಿಸಲು ಅನುಮತಿಸಿದೆ. ಸ್ಥಳೀಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಂದಾಯ ಅಧಿಕಾರಿಗಳು ಸಮಾರಂಭಕ್ಕೆ ಭೇಟಿ ನೀಡಿ ಕೋವಿಡ್ ನಿಯಮಾವಳಿ ಉಲ್ಲಂಘನೆ ಆಗದಿರುವ ಬಗ್ಗೆ
ಖಾತ್ರಿಪಡಿಸಿಕೊಳ್ಳುವುದು.

9. ಪೂಜಾ ಸ್ಥಳಗಳಾದ ದೇವಾಲಯಗಳು, ಮಸೀದಿಗಳು, ಚರ್ಚುಗಳು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಜಾತ್ರೆಗಳನ್ನು, ಧಾರ್ಮಿಕ ಉತ್ಸವಗಳು, ಮೆರವಣಿಗೆಗಳನ್ನು ನಿರ್ಬಂಧಿಸಿದೆ.

10. ಕೋವಿಡ್ ಸಮುಚಿತ ವರ್ತನೆಯನ್ನು ಜಿಲ್ಲೆಯಾದ್ಯಂತ ಕಟ್ಟುನಿಟ್ಟಾಗಿ ಪಾಲಿಸುವುದು.

ಮೇಲಿನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಡಳಿತ ಸೂಚಿಸಿದೆ. ಈ
ಆದೇಶವನ್ನು ಯಾವುದೇ ವ್ಯಕ್ತಿ / ವ್ಯಕ್ತಿಗಳು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ
51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ
4, 5 ಮತ್ತು 10 ರಂತ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.