Monday, November 18, 2024
ಕೊಡಗು

ಮಡಿಕೇರಿ-ಸಂಪಾಜೆ ಹೆದ್ದಾರಿಯಲ್ಲಿ ಬಿರುಕು; ತಜ್ಞರಿಂದ ಮಣ್ಣು ಪರೀಕ್ಷೆ- ಕಹಳೆ ನ್ಯೂಸ್

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ವಾರ ಭಾರೀ ಮಳೆಯಾದ ಹಿನ್ನಲೆ ಮಡಿಕೇರಿ-ಸಂಪಾಜೆ ಹೆದ್ದಾರಿ ಮಾರ್ಗದ ಮದೆನಾಡು ಬಳಿ ರಸ್ತೆ ಬಿರುಕು ಬಿಟ್ಟಿದ್ದು, ಚರಂಡಿಗಳು ಹಾಳಾಗಿವೆ, ಸ್ಥಳಕ್ಕೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಶಾಸಕರಾದ ಕೆ.ಜಿ. ಬೋಪಯ್ಯ, ಪಶ್ಚಿಮ ಘಟ್ಟ ಕಾರ್ಯಪಡೆ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಡಿಕೇರಿ ನಗರಾಭಿವೃದ್ಧಿ ಅಧ್ಯಕ್ಷರಾದ ರಮೇಶ್ ಹೊಳ್ಳ, ರಾಷ್ಟ್ರೀಯ ಹೆದ್ದಾರಿ ವಿಭಾಗ ಕಾರ್ಯಪಾಲಕ ಇಂಜಿನಿಯರ್ ಜಿ.ಎನ್. ಹೆಗ್ಡೆ ಮುಂತಾದವರು ಸ್ಥಳ ಪರಿಶೀಲನೆ ನಡೆಸಿದರು.


ಸಂದರು ಕಾಟಗೇರಿ ಬಳಿ ಭೂ ಒತ್ತಡದಿಂದ ಚರಂಡಿ ಹಾಳಾಗಿರುವುದನ್ನು ಪರಿಶೀಲನೆ ನಡೆಸಿ, ಬಳಿಕ ಮಾತನಾಡಿದ ಸಂಸದ ಪ್ರತಾಪ್ ಸಿಂಹ “ಕಳೆದ ಮೂರು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಒಂದಲ್ಲ ಒಂದು ರೀತಿಯಲ್ಲಿ ಪ್ರಾಕೃತಿಕ ವಿಕೋಪ ಉಂಟಾಗುತ್ತಿದೆ”
“ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಮಡಿಕೇರಿ-ಸಂಪಾಜೆ ಮಾರ್ಗದ 18 ಕಡೆ ತಡೆಗೋಡೆ ನಿರ್ಮಿಸಲು ಉದ್ದೇಶಿಸಿಲಾಗಿತ್ತು. ಆದರೆ ಕಳೆದ ಜೂನ್ ತಿಂಗಳಲ್ಲಿ ವ್ಯಾಪಕ ಮಳೆಯಾದ ಹಿನ್ನಲೆ ಇನ್ನೂ ಹಲವು ಕಡೆ ತಡೆಗೋಡೆ ನಿರ್ಮಿಸಬೇಕಿದೆ. ಕೆಲವು ಕಡೆ ರಸ್ತೆ ಬಿರುಕು ಬಿಟ್ಟಿದೆ. ಹಾಗೆಯೆ ಚರಂಡಿ ಹಾಳಾಗಿದ್ದು, ಇದನ್ನು ಸರಿಪಡಿಸಬೇಕಿದೆ” ಎಂದು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು


“ಮದೆನಾಡು ಮುಂಭಾಗ ಭೂಮಿ ಒಳಭಾಗದಲ್ಲಿ ನೀರು ಸ್ಪೋಟವಾಗುತ್ತಿರುವ ಹಿನ್ನೆಲೆ ತಜ್ಞರಿಂದ ಮಣ್ಣು ಪರೀಕ್ಷೆ ಮಾಡಿಸಿ ರಸ್ತೆ ಹಾನಿಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಹಲವು ಕಡೆ ತಡೆಗೊಡೆ ನಿರ್ಮಿಸಲು ಶಾಸಕರಾದ ಕೆ. ಜಿ. ಬೋಪಯ್ಯ ಸಲಹೆ ಮಾಡಿದ್ದು, ಡಿಪಿಆರ್ ನಡೆಯುತ್ತಿದೆ” ಎಂದು ಸಂಸದರು ವಿವರಣೆ ನೀಡಿದರು.

ಜಾಹೀರಾತು
ಜಾಹೀರಾತು
ಜಾಹೀರಾತು