Wednesday, January 22, 2025
ಹೆಚ್ಚಿನ ಸುದ್ದಿ

ಕೊರೊನಾ ಪ್ರಕರಣ ಹೆಚ್ಚಳ ಹಿನ್ನಲೆ ಕರ್ನಾಟಕ- ಕೇರಳ ಗಡಿಯಲ್ಲಿ ಪೊಲೀಸರ ಕಟ್ಟೆಚ್ಚರ- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ಆದೇಶದಂತೆ ಕೊರೊನಾ ನೆಗೆಟಿವ್ ವರದಿ ರಹಿತರಿಗೆ ಕರ್ನಾಟಕ ಗಡಿ ಪ್ರವೇಶಕ್ಕೆ ತಲಪಾಡಿ ಗಡಿಯಲ್ಲಿ ತುರ್ತು ಅಗತ್ಯ ವಾಹನಗಳನ್ನು ಹೊರತು ಪಡಿಸಿ ಇತರ ವಾಹನ ಸಂಚಾರಕ್ಕೆ ಸಂಪೂರ್ಣ ನಿಬರ್ಂಧ ಹೇರಲಾಗಿದ್ದು, ಗಡಿಯಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳಕ್ಕೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿ “ನೆಗೆಟಿವ್ ರಿಪೋರ್ಟ್ ಇಲ್ಲದೇ ಗಡಿ ಪ್ರವೇಶಕ್ಕೆ ಅನುಮತಿ ನೀಡಬೇಡಿ” ಎಂದು ಖಡಕ್ ಸೂಚನೆ ನೀಡಿದ್ದಾರೆ. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಕೇರಳದ ಎಲ್‍ಡಿಎಫ್ ಮತ್ತು ಯುಡಿಎಫ್ ಕಾರ್ಯಕರ್ತರು ಹೆದ್ದಾರಿ ತಡೆದು ಸುಮಾರು ಅರ್ಧ ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನಾ ಸ್ಥಳಕ್ಕೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಕೇರಳ ಪೊಲೀಸ್ ಅಧಿಕಾರಿಗಳೊಂದಿದೆ ಚರ್ಚಿಸಿ, ಪ್ರತಾಪ್ ರೆಡ್ಡಿ ಭೇಟಿ ವೇಳೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಮತ್ತು ಪೊಲೀಸ್ ಆಯುಕ್ತ ಶಶಿಕುಮಾರ್ ಸಾಥ್ ನೀಡಿದರು. ಪರಿಶೀಲನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಪ್ರತಾಪ್ ರೆಡ್ಡಿ, ಕೇರಳದಲ್ಲಿ ಪಾಸಿಟಿವಿಟಿ ದರ ಕಡಿಮೆಯಾಗುವವರೆಗೆ ಈಗಿರುವ ನಿಬರ್ಂಧಗಳು ಜಾರಿಯಲ್ಲಿ ಇರುತ್ತದೆ. ಪಾಸಿಟಿವಿಟಿ ದರ ಕಡಿಮೆಯಾದ ತಕ್ಷಣ ಮತ್ತೆ ಸಹಜಸ್ಥಿತಿಗೆ ಮರಳಲಿದೆ, ಹಾಗೂ ಮೆಡಿಕಲ್ ಎಮರ್ಜೆನ್ಸಿ ಮತ್ತು ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳಿಗೆ ಮಾತ್ರ ಕರ್ನಾಟಕ ಗಡಿ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದು ತಿಳಿಸಿದರು.