Recent Posts

Sunday, January 19, 2025
ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ.

ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ ಮಂಗಳೂರಿನ ಕೇಂದ್ರ ಮೈದಾನಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ, 4 ಗಂಟೆಗೆ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನರೇಂದ್ರ ಮೋದಿಯವರು ವ್ಯಾಪಕ ಪ್ರಚಾರ ನಡೆಸಿದ್ದರೂ, ಅಲ್ಲಿನ ಎಂಟು ಕ್ಷೇತ್ರಗಳಲ್ಲಿ ಏಳನ್ನು ಕಾಂಗ್ರೆಸ್ ಗೆದ್ದಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿಗೆ ಕಾರ್ಯಕರ್ತರು ಶತಾಯಗತಾಯ ಪ್ರಯತ್ನ ನಡೆಸುತ್ತಿದ್ದಾರೆ. ರಾಜ್ಯಾದ್ಯಂತ ಚುನಾವಣೆಯ ಬಿಸಿ ಹೆಚ್ಚುತ್ತಿದ್ದಂತೆ ಕಾರ್ಯಕರ್ತರಲ್ಲಿ ಈ ಬಾರಿಯ ಚುನಾವಣೆ ಹೊಸ ಹುರುಪು ಮೂಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು