ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನಕ್ಕೆ ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಬೇಟಿ – ಕಹಳೆ ನ್ಯೂಸ್
ಬಂಟ್ವಾಳ: ಕರಾವಳಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ ಮತ್ತು ಅವರ ಧರ್ಮಪತ್ನಿ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೈವಸ್ಥಾನ ಕ್ಕೆ ಬೇಟಿ ನೀಡಿ ದೈವದ ಪ್ರಸಾದ ಪಡೆದುಕೊಂಡರು.
ಇವರ ಜೊತೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರಮುಖರಾದ ಉಪಾಧ್ಯಕ್ಷೆ ನಯನ ಗಣೇಶ್, ಕಾಪು ಯುವ ಮೋರ್ಚಾ ಅಧ್ಯಕ್ಷ ಸಚಿನ್ ಪಿತ್ರೋಡಿ, ಕಾಪು ಹಿಂದುಳಿದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರವಿ ಸಾಲಿಯಾನ್, ಉದ್ಯಾವರ ಗ್ರಾಮ ಪಂಚಾಯತ್ ಸದಸ್ಯ ರಮಾನಂದ ಕ್ಷೇತ್ರಕ್ಕೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಮ್ಮ, ಅರ್ಚಕರಾದ ವಾಸುಮೂಲ್ಯ, ನಾರಾಯಣ ಮೂಲ್ಯ ಮತ್ತು ಮಗನ ಪದಕ ಮೂಲ್ಯ , ವಿಶ್ವ ಹಿಂದೂ ಪರಿಷತ್ ತಾಲೂಕು ಉಪಾಧ್ಯಕ್ಷ ಲೋಹಿತ್ ಪಣೋಲಿಬೈಲು, ಜಯಶೆಟ್ಟಿ ಪಣೋಲಿಬೈಲು ಮತ್ತಿತರರು ಉಪಸ್ಥಿತರಿದ್ದರು.