
ಟೋಕಿಯೊ : 41 ವರ್ಷಗಳ ಬಳಿಕ ಇತಿಹಾಸ ಬರೆದ ಭಾರತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪುರುಷರ ಹಾಕಿ ತಂಡ ಇತಿಹಾಸ ನಿರ್ಮಿಸಿದ್ದು, ಜರ್ಮನಿಯನ್ನ ಮಣಿಸಿ ಕಂಚಿನ ಪದಕ ಮುಡಿಗೇರಿಸಿಕೊಂಡಿದೆ. ಒಲಿಂಪಿಕ್ಸ್‍ನಲ್ಲಿ ಮೂರನೇ ಸ್ಥಾನಕ್ಕಾಗಿ ನಡೆದ ಹೋರಾಟದಲ್ಲಿ ಭಾರತ ತಂಡವು ಜರ್ಮನಿ ವಿರುದ್ಧ 5-4 ಗೋಲುಗಳ ಅಂತರದ ಭರ್ಜರಿ ಗೆಲುವು ದಾಖಲಿಸಿದ್ದು, ಕಂಚಿನ ಪದಕ ಜಯಿಸಿದೆ. ಗೋಲುಗಳ ಸುರಿಮಳೆಯೇ ನಡೆದ ಪಂದ್ಯದಲ್ಲಿ ಜರ್ಮನಿ ತಂಡದ ವಿರೋಚಿತಿ ಪ್ರತಿರೋಧದ ಹೊರತಾಗಿಯೂ ಭಾರತೀಯ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಅರ್ಹ ಗೆಲುವು ದಾಖಲಿಸಲು ನೆರವಾದರು.